ಮುಂಡಗೋಡ: ಮಾಹಿತಿ ಆಧರಿಸಿ ಮನೆಯೊಂದಕ್ಕೆ ಜಿಂಕೆ ಮಾಂಸ ಹುಡುಕಾಟಕ್ಕೆ ಅರಣ್ಯಾಧಿಕಾರಿಗಳು ತೆರಳಿದ್ದರು. ಈ ವೇಳೆ ಅಧಿಕಾರಿಗಳಿಗೆ ಮನೆಯೊಂದರಲ್ಲಿ ಸುಮಾರು 2 ಗಂಟೆ ಕೂಡಿಹಾಕಿದ ಹಾಕಿದ ಘಟನೆ ತಾಲೂಕಿನ ಕೆಂದಲಗೇರಿ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಮನೆಯೊಂದರಲ್ಲಿ ಜಿಂಕೆ ಮಾಂಸ ಬಚ್ಚಿಡಲಾಗಿದೆ ಎಂಬ ಮಾಹಿತಿ ಬಂದ ಹಿನ್ನಲೆಯಲ್ಲಿ ರಾತ್ರಿಯೇ ಅರಣ್ಯಾಧಿಕಾರಿಗಳು, ತೆರಳಿದ್ದರು.
ಈ ವೇಳೆ ಎಷ್ಟೇ ಹುಡುಕಾಡಿದರೂ ಜಿಂಕೆಮಾoಸ ಸಿಕ್ಕಿಲ್ಲ. ಇದರಿಂದ ಕೋಪಗೊಂಡ ಗ್ರಾಮಸ್ಥರು, ನಿಮಗೆ ಸುಳ್ಳು ಮಾಹಿತಿ ಯಾರು ನೀಡಿದ್ದಾರೋ ಅವರ ಹೆಸರು ತಿಳಿಸಿ. ಅಲ್ಲಿಯವರೆಗೆ ನೀವು ಇಲ್ಲೇ ಇರಬೇಕಾಗುತ್ತದೆ ಎಂದು ಮನೆ ಬಾಗಿಲನ್ನು ಹಾಕಿ ಕೂಡಿ ಹಾಕಿದ್ದಾರೆ. ವಿಷಯ ತಿಳಿದ ಪಿಎಸ್‌ಐ ಬಸವರಾಜ ಮಬನೂರ ಸಿಬ್ಬಂದಿಯೊಡನೆ ಗ್ರಾಮಕ್ಕೆ ಆಗಮಿಸಿದಾಗ ಗ್ರಾಮಸ್ಥರು, ಸುಳ್ಳು ಮಾಹಿತಿ ನೀಡಿದವರ ಹೆಸರು ಹೇಳಲೇಬೇಕು ಎಂದು ಪಟ್ಟು ಹಿಡಿದರು. ಗ್ರಾಮಸ್ಥರಿಗೆ ಬುದ್ಧಿವಾದ ಹೇಳಿದ ಪೊಲೀಸರು, ತದನಂತರ ಸುರಕ್ಷಿತವಾಗಿ ಅರಣ್ಯ ಅಧಿಕಾರಿಗಳನ್ನು ಕರೆದುಕೊಂಡು ಬಂದಿದ್ದಾರೆ.
ವಿಸ್ಮಯ ನ್ಯೂಸ್, ಕಾರವಾರ
ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.