Follow Us On

WhatsApp Group
Important
Trending

ಹಿಜಾಬ್ ಕುರಿತ ಅಂತಿಮ ತೀರ್ಪು ಪ್ರಕಟ: ಹೈಕೋರ್ಟ್ ಹೇಳಿದ್ದೇನು ನೋಡಿ?

ಹಿಜಾಬ್ ಧರ್ಮದ ಆಚರಣೆಯಲ್ಲ. ಹಿಜಾಬ್ ಇಸ್ಲಾಮಿನ ಅತ್ಯಗತ್ಯ ಆಚರಣೆಯೂ ಇಲ್ಲ. ಸರ್ಕಾರ ಸಮವಸ್ತ್ರ ಕಡ್ಡಾಯಗೊಳಿಸಿದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಸರ್ಕಾರದ ಆದೇಶ ಕಾನೂನು ಬದ್ಧವಾಗಿದೆ. ಸಮವಸ್ತ್ರ ಕಡ್ಡಾಯವಿರುವ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಗೆ ಅವಕಾಶವಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದ್ದು, ಅರ್ಜಿಯನ್ನು ವಜಾಗೊಳಿಸಿದೆ.. ಸಮವಸ್ತ್ರ ಕಡ್ಡಾಯ ಆದೇಶವನ್ನು ಎಲ್ಲರೂ ಪಾಲಿಸಬೇಕು ಎಂದು ಹೇಳಿದೆ. ತರಗತಿಗಳಲ್ಲಿ ಯಾವುದೇ ಧಾರ್ಮಿಕ ವಸ್ತçಗಳನ್ನು ಧರಿಸುವಂತಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್, ನ್ಯಾಯಮೂರ್ತಿ ಜೆಎಂ ಖಾಜಿ ಅವರಿದ್ದ ಪೂರ್ಣ ಪೀಠ ಫೆ.10 ರಂದು ಅರ್ಜಿ ವಿಚಾರಣೆ ಪ್ರಾರಂಭಿಸಿತ್ತು. ಎರಡು ವಾರಗಳ ಕಾಲ ಸತತ ವಿಚಾರಣೆ ನಡೆದಿದ್ದು, ಇದೀಗ ತೀರ್ಪು ಪ್ರಕಟಿಸಿದೆ. ಸತತ 11 ವಾರಗಳ ಕಾಲ ವಾದ ವಿವಾದ ನಡೆದಿತ್ತು. ಇದೇ ಎಲ್ಲರೂ ಶಾಂತಿ ಕಾಪಾಡಬೇಕೆಂದು ಗೃಹ ಸಚಿವರು ವಿನಂತಿಸಿಕೊoಡಿದ್ದಾರೆ.

ಉತ್ತರಕನ್ನಡದಲ್ಲಿ ಹೇಗಿದೆ ಪರಿಸ್ಥಿತಿ?

ತೀರ್ಪು ಪ್ರಕಟವಾಗುವ ಹಿನ್ನಲೆಯಲ್ಲಿ ರಾಜ್ಯದ ವಿವಿಧೆಡೆ ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಕೂಡಾ 144 ಸೆಕ್ಷನ್ ಜಾರಿ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಶಾಲಾ – ಕಾಲೇಜುಗಳ ಮುಂದೆ ಪೊಲೀಸ್ ನಿಯೋಜನೆ ಮಾಡಲಾಗಿದೆ. ಅಲ್ಲದೆ, ಆಯಕಟ್ಟಿನ ಪ್ರದೇಶದಲ್ಲೂ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.

ಸೂಕ್ಷö್ಮ ಪ್ರದೇಶಗಳಲ್ಲಿ ಪ್ರತಿ ಶಾಲಾ ಕಾಲೇಜುಗಳ ಮುಂದೆ ಪೋಲಿಸರು ಕಾವಲು ಕಾಯುತ್ತಿದ್ದು, ಬನವಾಸಿ, ಹೊನ್ನಾವರ, ಭಟ್ಕಳ ತಾಲೂಕಿನ ಮೇಲೆ ಹೆಚ್ಚು ನಿಗಾ ಇಡಲಾಗಿದೆ. ಆದರೆ, ಶಿರಸಿ ಮಾರಿಕಾಂಬಾ ಜಾತ್ರೆ ಸೇರಿದಂತೆ ಪೂರ್ವ ನಿಯೋಜಿತ ಜಾತ್ರೆ, ಧಾರ್ಮಿಕ ಕಾರ್ಯಕ್ರಮ ವಿನಾಯಿತಿ ನೀಡಲಾಗಿದೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button