ಭಟ್ಕಳ: ಹೈಕೋರ್ಟ್ ಹಿಜಾಬ್ ತೀರ್ಪು ನೀಡಿದ್ದು, ತೀರ್ಪು ವಿರೋಧಿಸಿ, ಭಟ್ಕಳದಲ್ಲಿ ನಾಳೆ ಅಂಗಡಿ ಮುಂಗಟ್ಟುಗಳನ್ನು ಸ್ವಯಂಪ್ರೇರಿತವಾಗಿ ಬಂದ್ ಮಾಡಲು ತಂಜೀಮ್ ಸಂಘಟನೆ ಕರೆ ನೀಡಿದೆ. ಹೈಕೋರ್ಟ್ ತೀರ್ಪಿನ ವಿರುದ್ಧ ಭಟ್ಕಳ ತಂಜಿಂ ಸಂಸ್ಥೆ ವಿರೋಧ ವ್ಯಕ್ತಪಡಿಸಿದ್ದು, ನಾಳೆ ತಂಜಿಂ ಸಂಸ್ಥೆ ಕಾರ್ಯನಿರ್ವಹಿಸುತ್ತಿಲ್ಲ
ಈ ಬಗ್ಗೆ ತಂಜಿಂ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ತಂಜಿಂ ಬುಧವಾರ ಕಾರ್ಯನಿರ್ವಹಿಸುವುದಿಲ್ಲ. ನಮ್ಮ ಇತರ ಸದಸ್ಯರು ಕೂಡ ಅವರ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಿದ್ದಾರೆ. ನಾವು ಯಾರ ಮೇಲೂ ಒತ್ತಡ ಹೇರುತ್ತಿಲ್ಲ. ಸ್ವ ಇಚ್ಚೆಯಿಂದ ಬಂದ ಮಾಡಲು ಬಯಿಸಿದರೆ ಅವರು ಬಂದ್ ಮಾಡಬಹುದು ಎಂದು ಕರೆ ನೀಡಿದ್ದಾರೆ
ಇದೇ ವೇಳೆ, ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧಾರಣೆಗೆ ನಿರ್ಬಂಧ ವಿಧಿಸಿ ಹೈಕೋರ್ಟ್ ತೀರ್ಪು ನೀಡಿದ ಬಳಿಕ ಪಟ್ಟಣದಲ್ಲಿ ಮುಸ್ಲಿಂ ವರ್ತಕರು ತಮ್ಮ ಅಂಗಡಿ ಮುಂಗಟ್ಟುಗಳನ್ನು ಸ್ವಯಂಪ್ರೇರಿತರಾಗಿ ಮುಚ್ಚಿದರು.
ತೀರ್ಪು ಪ್ರಕಟಗೊಂಡ ಬೆನ್ನಲ್ಲೇ ಮುಸ್ಲಿಮರು ತಮ್ಮ ಅಂಗಡಿ ಮುಂಗಟ್ಟುಗಳ ಬಾಗಿಲು ಮುಚ್ಚಿ ಅಸಮಾಧಾನ ವ್ಯಕ್ತಪಡಿಸಿದರು. ಪಟ್ಟಣದ ಬರ್ಮಾ ಬಝಾರ್, ಮುಖ್ಯ ರಸ್ತೆಯಲ್ಲಿರುವ ಮಳಿಗೆಗಳ ಬಾಗಿಲು ಮುಚ್ಚಿದ ಕಾರಣ ತಿಳಿಯದೇ ಜನ ಗೊಂದಲಕ್ಕೀಡಾದರು.
ವಿಸ್ಮಯ ನ್ಯೂಸ್ , ಉದಯ್ ಎಸ್ ನಾಯ್ಕ ಭಟ್ಕಳ
ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.