ಭಟ್ಕಳದಲ್ಲಿ ನಿಷೇಧಾಜ್ಞೆ ಜಾರಿ ಇದ್ದರು ಬಲವಂತವಾಗಿ ಮುಸ್ಲಿಂ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸುತ್ತಿದ್ದ ನಾಲ್ವರ ಮೇಲೆ ಪ್ರಕರಣ ದಾಖಲು
ಭಟ್ಕಳ : ಹಿಜಾಬ್ ತೀರ್ಪಿನ ಹಿನ್ನೆಲೆ ಭಟ್ಕಳದಲ್ಲಿ ನಿಷೇಧಾಜ್ಞೆ ಜಾರಿಯ ನಡುವೆ ತೀರ್ಪಿನ ವಿರುದ್ಧ ಬಲವಂತವಾಗಿ ಮುಸ್ಲಿಂ ಸಮುದಾಯದ ಅಂಗಡಿ ಮುಂಗಟ್ಟನ್ನು ಬಂದ್ ಮಾಡಿಸುತ್ತಿದ್ದ ನಾಲ್ವರ ಮೇಲೆ ಪ್ರಕರಣ ದಾಖಲಾಗಿದೆ. ಆರೋಪಿತರನ್ನು ಶಾರೀಕ್ ಅನೀಸ್ ಪನ್ ಸೋಪ್ತಕರ್, ತೈಮುರ್ ಹಸ್ಸನ್ ಗವಾಯಿ ಶಾಹುಲ್ ಹಮೀದ್ ಗವಾಯಿ, ಅಜೀಮ್ ಅಹ್ಮದ್ ಮೊಹ್ಮದ ಅರಿಫ್, ಮೋಹಿದ್ದೀನ್ ಅಬೀರ್ ಅಬುಮೊಹ್ಮದ ಎಂದು ಗುರುತಿಸಲಾಗಿದೆ.
ಇವರೆಲ್ಲ ಹಿಜಾಬ್ ನಿಷೇಧದ ಅರ್ಜಿಗಳನ್ನು ವಜಾಗೊಳಿಸಿ ಹೈಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೇ ಭಟ್ಕಳದಲ್ಲಿ ಯಾವುದೇ ಅನುಮತಿ ಪಡೆಯದೆ ಗಲಾಟೆ ಮಾಡುವ ಉದ್ದೇಶದಿಂದ ಹೈಕೋರ್ಟ್ ತೀರ್ಪಿನ ಬಗ್ಗೆ ಯಾವುದೇ ರೀತಿಯ ಪ್ರತಿಭಟನೆ, ಸಾರ್ವಜನಿಕ ಮೆರವಣಿಗೆ ,ಸಭೆ ಸಮಾರಂಭ ನಡೆಸುವುದನ್ನು ನಿಷೇದವಿದ್ದರೂ, ಭಟ್ಕಳ ಹಳೆ ಬಸ್ ನಿಲ್ದಾಣದ ಸಮೀಪ ಬಲವಂತವಾಗಿ ಮುಸ್ಲಿಂ ಸಮುದಾಯದ ಅಂಗಡಿ ಮುಂಗಟ್ಟನ್ನು ಬಂದ ಮಾಡಿಸಿದ್ದಾರೆ. ಈ ಹಿನ್ನಲೆಯಲ್ಲಿ ಇವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಉತ್ತರ ಕನ್ನಡ ಜಿಲ್ಲಾದ್ಯಂತ ನಿಷೇಧಾಜ್ಞೆ ಮಾಡಿದ್ದನ್ನು ಉದ್ದೇಶ ಪೂರಕವಾಗಿ ಉಲ್ಲಂಘನೆ ಮಾಡಲಾಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ.
ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ
ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.