ಸಮುದ್ರ ಅಲೆಗಳ ಹೊಡೆತಕ್ಕೆ ಸಿಲುಕಿದ ವ್ಯಕ್ತಿ ಸಾವು: ಬಲೆ ಬಳಸಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ನಡೆದ ದುರ್ಘಟನೆ.
ಅಂಕೋಲಾ: ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ ವ್ಯಕ್ತಿ ಅಲೆಗಳ ಹೊಡೆತಕ್ಕೆ ಸಿಲುಕಿ, ನೀರಿನಲ್ಲಿ ಮುಳುಗಿ, ನಂತರ ಮೃತ ಪಟ್ಟ ಘಟನೆ ತಾಲೂಕಿನ ಹಾರವಾಡಾ ವ್ಯಾಪ್ತಿಯ ಸೀ ಬರ್ಡ್ ಕಾಲನಿ ಬಳಿ ನಡೆದಿದೆ.ಹಾರವಾಡ ನೌಕಾನೆಲೆ ನಿರಾಶ್ರಿತರ ಕಾಲನಿಯ ನಿವಾಸಿ ಶ್ರೀಕಾಂತ ಜಾನು ಖಾರ್ವಿ (65) ಮೃತ ದುರ್ದೈವಿ.
ಈತ ಬಲೆ ಮೀನುಗಾರಿಕೆ ನಡೆಸುತ್ತಿದ್ದಾಗ ಅಲೆಗಳ ಹೊಡೆತಕ್ಕೆ ಸಿಲುಕಿ ಸಮುದ್ರದಲ್ಲಿ ಮುಳುಗಿ ಅಸ್ವಸ್ಥಗೊಂಡಿದ್ದು, ತಕ್ಷಣ ಆತನನ್ನು ಅಂಕೋಲಾದ ತಾಲೂಕಾ ಸರ್ಕಾರಿ ಆಸ್ಪತ್ರೆಗೆ ಕರೆ ತರಲಾಯಿತಾದರೂ , ಚಿಕಿತ್ಸೆಗೆ ಸ್ಪಂದಿಸದ ಆತ ಮೃತ ಪಟ್ಟಿರುವುದಾಗಿ,ವೈದ್ಯರು ದೃಡಪಡಿಸಿರುವುದಾಗಿ ತಿಳಿದು ಬಂದಿದೆ. ಈ ಕುರಿತು ರೋಹಿದಾಸ ಜಾನು ಹರಿಕಂತ್ರ ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡ ಪೋಲೀಸರು ತನಿಖೆ ಮುಂದುವರೆಸಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ, ಖಾಸಗಿ ಆಸ್ಪತ್ರೆ ಅಂಬುಲೆನ್ಸ್ ಸೇವೆ ಪಡೆದು ಮೃತದೇಹವನ್ನು ಹಾರವಾಡಕ್ಕೆ ಸಾಗಿಸಲಾಯಿತು.
ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ
ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.