Important
Trending

ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿ: ಆರು ಪ್ರಯಾಣಿಕರಿಗೆ ಗಾಯ: ಓರ್ವ ಗಂಭೀರ

ಕುಮಟಾ: ಎರಡು ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಎರಡು ಕಾರಿನಲ್ಲಿದ್ದ ಒಟ್ಟು ಆರು ಪ್ರಯಾಣಿಕರು ಗಾಯಗೊಂಡ ಘಟನೆ ತಾಲೂಕಿನ ಹರಕಡೆ ಸಮೀಪ ನಡೆದಿದೆ. ಈ ದುರ್ಘಟನೆಯಲ್ಲಿ ಓರ್ವನಿಗೆ ಗಂಭೀರ ಗಾಯವಾಗಿದ್ದು, ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಐವರು ಕುಮಟಾದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಅಪಘಾತಕ್ಕೀಡಾದ ಕಾರು ಹೊರರಾಜ್ಯದ ಕಾರಾಗಿದ್ದು, ಗೋವಾದಿಂದ ಮಂಗಳೂರು ಹೋಗುತ್ತಿದ್ದ ಕಾರು ಮತ್ತು ಮಂಗಳೂರಿನಿoದ ಗೋವಾಕ್ಕೆ ಹೋಗುತ್ತಿದ್ದ ಕಾರಿನ ಮಧ್ಯೆ ಅಪಘಾತವಾಗಿದೆ. ಈ ಕುರಿತು ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಕುಮಟಾ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button