ಕಾರವಾರ ಪ್ರವಾಸಕ್ಕೆಂದು ತಾಲೂಕಿನ ಶಿರ್ವೆ ಗ್ರಾಮಕ್ಕೆ ಆಗಮಿಸಿದ್ದ ಶಾಲಾ ವಿದ್ಯಾರ್ಥಿಗಳ ಮೇಲೆ ಜೇನುನೊಣಗಳು ದಾಳಿ ಮಾಡಿದ ಘಟನೆ ನಡೆದಿದೆ. ಬೆಳ್ಳೂರಿನ ಶಾಂತಿನಿಕೇತನ ಶಾಲೆಯ ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಶಿರ್ವೆಯ ಕಾಡಿನಲ್ಲಿ ಹೋದ್ದು ಆ ಸಮಯದಲ್ಲಿ ಕಾಡಿನಿಂದ ಬಂದ ಜೇನುನೊಣಗಳು ಇದ್ದಕ್ಕಿದ್ದಂತೆ ದಾಳಿ ನಡೆಸಿವೆ.
ಇದರಿಂದ ಹೆದರಿದ ವಿದ್ಯಾರ್ಥಿಗಳು ದಿಕ್ಕಾಪಾಲಾಗಿ ಕಾಡಿನಲ್ಲಿ ಓಡಿಹೋಗಿದ್ದು 13 ವಿದ್ಯಾರ್ಥಿಗಳು ಜೇನುಹುಳದ ಕಡಿತದಿಂದ ಗಾಯಗೊಂಡಿದ್ದಾರೆ. ತಕ್ಷಣ ವಿದ್ಯಾರ್ಥಿಗಳನ್ನು ಅಂಬುಲನ್ಸ್ ನಲ್ಲಿ ಕಾರವಾರದ ವೈದ್ಯಕೀಯ ಮಹಾವಿದ್ಯಾಲಯಕ್ಕೆ ಕರೆತರಲಾಯಿತು. ಚಿಕಿತ್ಸೆಯ ನಂತರ ವಿದ್ಯಾರ್ಥಿಗಳು ಚೇತರಿಸಿಕೊಂಡಿದ್ದಾರೆ.
ವಿಸ್ಮಯ ನ್ಯೂಸ್, ಕಾರವಾರ
ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.