ಕುಮಟಾ: ಬಾಲಕನ ಮೇಲೆ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ತಾಲೂಕಿನ ವನ್ನಳ್ಳಿಯ ವ್ಯಕ್ತಿಯನ್ನು ಪೋಲಿಸರು ಬಂಧಿಸಿದ್ದಾರೆ. ಅಂಗಡಿಯ ಹತ್ತಿರ ಆಟವಾಡುತ್ತಿದ್ದ ಬಾಲಕನನ್ನು ಪುಸಲಾಯಿಸಿ, ಬೈಕ್ ನಲ್ಲಿ ನಿರ್ಜನ ಪ್ರದೇಶಕ್ಕೆ ಆರೋಪಿ ಕರೆದೊಯ್ದು, ದುಷ್ಕೃತ್ಯ ನಡೆಸಿದ್ದಾನೆ ಎಂದು ದೂರಿನಲ್ಲಿ ದಾಖಲಿಸಲಾಗಿದೆ.
ಈ ವಿಷಯವನ್ನು ನಂತರ ಬಾಲಕ ತನ್ನ ಪಾಲಕರಿಗೆ ತಿಳಿಸಿದ್ದು, ಈ ಹಿನ್ನೆಲೆಯಲ್ಲಿ ಪಾಲಕರು ತಕ್ಷಣ ಪೊಲೀಸರಿಗೆ ದೂರು ನೀಡಿದ್ದರು. ಬಂಧಿತ ಆರೋಪಿಯನ್ನು ಅನ್ಸಾರಿ ತಂದೆ ಖಾಸಿಂ ಜಿಂಗ್ರೋ ಎಂದು ಗುರುತಿಸಲಾಗಿದೆ. ದೂರನ್ನು ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಪೊಲೀಸರ ತನಿಖೆ ಮುಂದುವರಿದಿದೆ.
ವಿಸ್ಮಯ ನ್ಯೂಸ್, ಯೋಗೇಶ್ ಮಡಿವಾಳ, ಕುಮಟಾ
ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.