ಬೀದಿ ನಾಯಿಗಳಿಂದ ಜಿಂಕೆಯನ್ನು ರಕ್ಷಿಸಿದ ಸ್ಥಳೀಯರು

ಮುಂಡಗೋಡ: ಬೀದಿ ನಾಯಿಗಳ ದಾಳಿಗೆ ಒಳಗಾಗಿದ್ದ ಜಿಂಕೆಯನ್ನು ಸ್ಥಳೀಯ ಗ್ರಾಮಸ್ಥರು ರಕ್ಷಿಸಿದ ಘಟನೆ ತಾಲೂಕಿನಲ್ಲಿ ನಡೆದಿದೆ. ಆಹಾರ- ನೀರು ಅರಸುತ್ತಾ ಜಿಂಕೆಯೊoದು ಕಾಡಿನಿಂದ ನಾಡಿಗೆ ಬಂದಿತ್ತು. ಇದನ್ನು ನೋಡಿದ ಬೀದಿನಾಯಿಗಳ ಗುಂಪು ಬೆನ್ನಟ್ಟಿ ಗಾಯಗೊಳಿಸಲು ಪ್ರಯತ್ನಪಟ್ಟಿವೆ. ಪ್ರಾಣಭಯದಿಂದ ಓಡಾಡುವುದನ್ನು ನೋಡಿದ ಗ್ರಾಮಸ್ಥರು, ನಾಯಿಗಳನ್ನು ಓಡಿಸಿ ಜಿಂಕೆಯನ್ನು ರಕ್ಷಿಸಿದ್ದಾರೆ.

ಒಂದೆರಡು ನಾಯಿ , ಜಿಂಕೆಯನ್ನು ಈ ವೇಳೆ ಕಚ್ಚಿದೆ. ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಅರಣ್ಯ ಸಿಬ್ಬಂದಿ ಚಿಕಿತ್ಸೆ ನೀಡಿ ಮರಳಿ ಜಿಂಕೆಯನ್ನು ಕಾಡಿಗೆ ಬಿಟ್ಟಿದ್ದಾರೆ.

ವಿಸ್ಮಯ ನ್ಯೂಸ್, ಯಲ್ಲಾಪುರ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Exit mobile version