Follow Us On

WhatsApp Group
Big News
Trending

ಮಕ್ಕಳೊಂದಿಗೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಇದ್ದಕ್ಕಿದ್ದಂತೆ ದಾಳಿ ಮಾಡಿದ ಮಂಗ: ಬೈಕ್ ಸವಾರನಿಗೆ ಗಾಯ

ಭಟ್ಕಳ: ಮಂಗವೊoದು ಬೈಕ್ ಸವಾರನ ಮೇಲೆ ಏಕಾಏಕಿ ದಾಳಿ ನಡೆಸಿ ಆತನ ಕೈ ಗಾಯಗೊಳಿಸಿದ ಘಟನೆ ಜಾಲಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕಾರಗದ್ದೆಯಲ್ಲಿ ನಡೆದಿದೆ. ಗಾಯಗೊಂಡ ಯುವಕ ಒಮರ್ ಬಿಲಾಲ್ (35) ಎಂದು ಗುರುತಿಸಲಾಗಿದೆ. ಈತ ತನ್ನ ಮಕ್ಕಳೊಂದಿಗೆ ಬೈಕ್‌ನಲ್ಲಿ ಸಂಬoಧಿಕರೊಬ್ಬರನ್ನು ಭೇಟಿ ಮಾಡಲು ಹೋಗುತ್ತಿದ್ದಾಗ ಕೋತಿ ಇದ್ದಕ್ಕಿದ್ದಂತೆ ಬೈಕ್ ಮೇಲೆ ಜಿಗಿದಿದೆ.

ಈ ವೇಳೆ ಬಿಲಾಲ್ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದು, ಕೋತಿ ಗಾಯಗೊಳಿಸಿದೆ. ತಕ್ಷಣ ಸ್ಥಳೀಯರು ಸಹಾಯಕ್ಕೆ ಧಾವಿಸಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದರು. ಗಾಯಾಳುವನ್ನ ಭಟ್ಕಳ ಸರಕಾರಿ ಆಸ್ಪತ್ರೆಗೆ ಕರೆದೊಯ್ದು ಅಗತ್ಯ ಚುಚ್ಚುಮದ್ದು ಹಾಗೂ ಚಿಕಿತ್ಸೆ ಕೊಡಿಸಲಾಗಿದೆ.

ಇದೇ ವೇಳೆ, ಮಂಗವೊoದು ವೃದ್ಧೆಯ ಮೇಲೆ ದಾಳಿ ನಡೆಸಿ ಗಾಯಗೊಳಿಸಿದೆ ಎನ್ನಲಾಗಿದ್ದು, ಗಾಯಗೊಂಡ ವೃದ್ಧೆಯನ್ನು ಮಂಗ್ಲಿ ಸೋನು ಗೊಂಡ (72) ಎಂದು ಗುರುತಿಸಲಾಗಿದೆ. ಕಾರ್ಗೆದ್ದೆ ಸಮೀಪದ ಹೋರೋಲಿ ಎಂಬಲ್ಲಿನ ತನ್ನ ಮನೆಯ ಹೊರಗೆ ಇದ್ದಾಗ ಮಂಗ ಗಾಯಗೊಳಿಸಿದೆ ಎನ್ನಲಾಗಿದೆ. ಮಂಗಗಳ ಪದೇ ಪದೇ ದಾಳಿಯಿಂದ ಸಾರ್ವಜನಿಕರು ಆತಂಕಗೊoಡಿದ್ದಾರೆ.

ವಿಸ್ಮಯ ನ್ಯೂಸ್, ಭಟ್ಕಳ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button