ಎರಡು ದಿನದಲ್ಲಿ ಪರೀಕ್ಷೆ ಇದೆ ಓದಿಕೋ ಎಂದು ತಾಯಿ ಹೇಳಿದ್ದಕ್ಕೆ ಬೇಸರ: ಬಾವಿಗೆ ಹಾರಿ ಸಾವಿಗೆ ಶರಣಾದ ಮಗಳು
ಶಿರಸಿ: ಪರೀಕ್ಷೆ ಇದೆ ಓದಿಕೋ ಎಂದು ತಾಯಿ ಹೇಳಿದ್ದಕ್ಕೆ ಮನನೊಂದು ಮಗಳು ಬಾವಿಗೆ ಹಾರಿ ಸಾವಿಗೆ ಶರಣಾದ ಘಟನೆ ತಾಲೂಕಿನ ಲಂಡಕನಹಳ್ಳಿಯಲ್ಲಿ ನಡೆದಿದೆ. ಇನ್ನೆರಡು ದಿನದಲ್ಲಿ ಪರೀಕ್ಷೆ ಇದೆ. ಸರಿಯಾಗಿ ಓದಿಕೊ ಎಂದು ತಾಯಿ ಬುದ್ಧಿವಾದ ಹೇಳಿದ್ದನ್ನೇ ಮನಸ್ಸಿಗೆ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
11 ವರ್ಷದ ಪ್ರಜ್ಞಾ ತಳವಾರ ಆತ್ಮಹತ್ಯೆ ಮಾಡಿಕೊಂಡ ಬಾಲಕಿ ಎಂದು ತಿಳಿದುಬಂದಿದೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇತ್ತಿಚಿನ ದಿನಗಳಲ್ಲಿ ಯುವ ಜನತೆ ಸಣ್ಣ ಸಣ್ಣ ವಿಷಯನ್ನೇ ಮನಸ್ಸಿಗೆ ಹಚ್ಚಿಕೊಂಡು ಸಾವಿಗೆ ಶರಣಾಗುತ್ತಿರುವ ಪ್ರಕರಣ ಹೆಚ್ಚುತ್ತಿರುವುದು ವಿಪರ್ಯಾಸವೇ ಸರಿ.
ವಿಸ್ಮಯ ನ್ಯೂಸ್, ಶಿರಸಿ
ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.