Important
Trending

ತಾಲೂಕಿನ ಪ್ರತಿಷ್ಠಿತ ವಿದ್ಯಾಕೇಂದ್ರವೊಂದರಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳಿಗೆ ಕಾಪಿ ಹೊಡೆಯಲು ಸಹಕಾರ ಆರೋಪ ? ಮನೆಗೆ ಬಂದು ಪಾಲಕರಿಗೆ ವಿದ್ಯಾರ್ಥಿ ಹೇಳಿದ್ದೇನು?

ಕುಮಟಾ: ತಾಲೂಕಿನ ಪ್ರತಿಷ್ಠಿತ ವಿದ್ಯಾಕೇಂದ್ರವೊಂದರಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ವೇಳೆ ಮೇಲ್ವಿಚಾರಕರೇ ವಿದ್ಯಾರ್ಥಿಗಳಿಗೆ ಕಾಫಿ ಹೊಡೆಯಲು ಅವಕಾಶ ಕೊಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕಾಫಿ ಹೊಡೆಯಲು ಅವಕಾಶ ಕೊಟ್ಟಿರುವ ಕುರಿತು ಕೆಲವು ವಿದ್ಯಾರ್ಥಿಗಳು ಗಮನಿಸಿದ್ದು, ಇದನ್ನು ಮನೆಗೆ ಬಂದು ಪಾಲಕರಿಗೆ ತಿಳಿಸಿದ್ದಾರೆ. ಈ ಕುರಿತು ಜವಾಬ್ದಾರಿಯುತ ಪಾಲಕರು, ವಿಸ್ಮಯ ಟಿ,ವಿಗೆ ಅಧಿಕೃತವಾಗಿ ಮಾಹಿತಿ ನೀಡಿದ್ದು, ಹೀಗಾದರೆ ಹೇಗೆ? ಇದರಿಂದ ಕೆಲ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತದೆ ಎಂದು ದೂರಿದ್ದಾರೆ.

ಈ ಕುರಿತು ವಿಸ್ಮಯ ಟಿ.ವಿ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಸಂಪರ್ಕಿಸಿದಾಗ, ಅವರು ಕೂಡಲೇ ಇದರ ಬಗ್ಗೆ ವಿಚಾರಣೆ ನಡೆಸುತ್ತೇನೆ. ಕೇಂದ್ರದಲ್ಲಿನ ಸಿಸಿಟಿವಿ ಪರಿಶೀಲಿಸಲಾಗುವುದು. ಒಂದು ವೇಳೆ ಇಂಥ ಘಟನೆ ನಡೆದಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ವಿಸ್ಮಯ ನ್ಯೂಸ್, ಕುಮಟಾ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button