Follow Us On

Google News
Important
Trending

ಚಾಲಕನ ನಿಯಂತ್ರಣ ತಪ್ಪಿ ನಡುರಸ್ತೆಯಲ್ಲೇ ಲಾರಿ ಪಲ್ಟಿ: ಪ್ರಾಣಾಪಾಯದಿಂದ ಪಾರಾದ ಚಾಲಕ

ಹೊನ್ನಾವರ: ಪಟ್ಟಣದ ಗೇರುಸೊಪ್ಪಾ ವೃತ್ತದ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸರಕು ತುಂಬಿದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ. ಕುಮಟಾ ಮಾರ್ಗದಿಂದ ಭಟ್ಕಳ ಮಾರ್ಗವಾಗಿ ಚಲಾಯಿಸುತಿದ್ದ ಲಾರಿ ಪಲ್ಟಿಯಾಗಿದೆ. ಪಲ್ಟಿ ರಭಸಕ್ಕೆ ಬಿದ್ದ ಸ್ಥಳದಿಂದ ಅಣತಿ ದೂರಕ್ಕೆ ರಸ್ತೆಯಲ್ಲಿ ಜಾರಿಕೊಂಡು ಹೋಗಿರುವುದರಿಂದ ಲಾರಿ ಜಖಂಗೊoಡಿದೆ,

ವಾಹನದಲ್ಲಿ ಪಾತ್ರೆಗೆ ಬಳಸುವ ಕಚ್ಚಾ ವಸ್ತುಗಳನ್ನು ಸಾಗಿಸುತ್ತಿದ್ದರು. ವಾಹನ ಚಾಲಕ ಚಿಕ್ಕಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಹೊನ್ನಾವರ ಪೊಲೀಸರು ಸ್ಥಳಕ್ಕೆ ಆಗಮಿಸಿ, ಲಾರಿ ಬಿದ್ದ ಸ್ಥಳದಲ್ಲಿ ಬ್ಯಾರಿಕೇಡ್ ಅಳವಡಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಪ್ರಕರಣದ ಬಗ್ಗೆ ಯಾವುದೆ ಮಾಹಿತಿ ಲಭ್ಯವಾಗಿಲ್ಲ.

ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ, ಹೊನ್ನಾವರ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button