ವೇಶ್ಯಾವಾಟಿಕೆ ನಡೆಯುತ್ತಿರುವಾಗಲೇ ಮುಡೇಶ್ವರದಲ್ಲಿ ದಾಳಿ: ಯುವತಿಯ ರಕ್ಷಣೆ: ತಪ್ಪಿಸಿಕೊಂಡ ಆರೋಪಿಗಳಿಗಾಗಿ ಶೋಧ

ಭಟ್ಕಳ: ತಾಲೂಕಿನ ಮುರ್ಡೇಶ್ವರದಲ್ಲಿ ವೇಶ್ಯಾವಾಟಿಕೆ ಅಡ್ಡೆಯ ಮೇಲೆ ದಾಳಿ ನಡೆಸಿದ ಪೊಲೀಸರು ಶಿರಸಿ ಮೂಲದ ಓರ್ವ ಮಹಿಳೆಯನ್ನು ರಕ್ಷಿಸಿದ್ದು, ಪರಾರಿಯಾದ ಆರೋಪಿಗಳ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ. ಮುರ್ಡೇಶ್ವರದ ಬಸ್ ನಿಲ್ದಾಣದ ಎದುರಿನ ಲಾಡ್ಜ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಮಾಹಿತಿ ಸಂಗ್ರಹಿಸಿದ ಭಟ್ಕಳ ಸಿಪಿಐ ಮಹಾಬಲೇಶ್ವರ ನಾಯ್ಕ ಮುಡೇಶ್ವರ ಪಿಎಸ್‌ಐ ದೇವರಾಜ ಬಿರಾದರ ತಂಡದೊoದಿಗೆ ದಾಳಿ ನಡೆಸಿದ್ದರು.

ಈ ವೇಳೆ ಲಾಡ್ಜ್ನಲ್ಲಿದ್ದ ಗದಗ ಮೂಲದ ಮಧುಕುಮಾರ ದೇವೇಂದ್ರಪ್ಪ, ಸ್ಥಳೀಯ ನಿವಾಸಿ ಕೇಶವ ನಾಗಯ್ಯ ನಾಯ್ಕ ಆರೋಪಿಗಳು ಪರಾರಿಯಾಗಿದ್ದಾರೆ. ವೇಶ್ಯಾವಾಟಿಕೆ ನಡೆಯುತ್ತಿರುವಾಗಲೇ ಪೊಲೀಸರು ದಾಳಿ ನಡೆಸಿ ಶಿರಸಿ ಮೂಲದ ಮಹಿಳೆಯ ರಕ್ಷಣೆ ಮಾಡಿದ್ದಾರೆ. ಈ ಕುರಿತು ಮುರ್ಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Exit mobile version