Follow Us On

WhatsApp Group
Focus News
Trending

ಪುರಾಣ ಪ್ರಸಿದ್ಧ ಶ್ರೀ ಶಾಂತಿಕಾಂಬ ಪರಮೇಶ್ವರಿ ದೇವಿಯ ಮಹಾರಥೋತ್ಸವ: ಹರಕೆ ಸಲ್ಲಿಸಿದ ಭಕ್ತರು

ಕುಮಟಾ: ತಾಲೂಕಿನ ಹೆಗಡೆಯಲ್ಲಿ ನೆಲೆಸಿರುವ ಪುರಾಣ ಪ್ರಸಿದ್ಧ ಶ್ರೀ ಶಾಂತಿಕಾಂಬ ಪರಮೇಶ್ವರಿ ದೇವಿಯ ಮಹಾರಥೋತ್ಸವವು ಸಾವಿರಾರು ಭಕ್ತರ ನಡುವೆ ವಿಜೃಂಭಣೆಯಿoದ ಜರುಗಿತು. ಜಾತ್ರಾ ರಥೋತ್ಸವ ನಿಮಿತ್ತವಾಗಿ ಶ್ರೀ ಶಾಂತಿಕಾಂಬ ಪರಮೇಶ್ವರಿ ದೇವಿಗೆ ಬೆಳಗ್ಗೆಯಿಂದ ಅಭಿಷೇಕ, ಹೋಮ ಹವನ, ಅಲಂಕಾರ ಸೇರಿದಂತೆ ನಾನಾ ಧಾರ್ಮಿಕ ಪೂಜಾ ಕಾರ್ಯಕ್ರಮಗಳನ್ನು ನಡೆಸಲಾಯಿತು.

ವಿವಿಧ ತಾಲೂಕು ಹಾಗೂ ಜಿಲ್ಲೆಯಿಂದ ಆಗಮಿಸಿದ ಸಾವಿರಾರು ಭಕ್ತರ ಸಮ್ಮುಖದಲ್ಲಿ ಶಾಂತಿಕಾಂಬ ಪರಮೇಶ್ವರಿ ದೇವಿಯ ರಥೋತ್ಸವ ಅದ್ಧೂರಿಯಾಗಿ ನೆರವೇರಿತು. ಅಪಾರ ಸಂಖ್ಯೆಯ ಭಕ್ತರು ಆಗಮಿಸಿ, ವಿಶೇಷ ಪೂಜೆ ಸಲ್ಲಿಸಿ, ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು.

ವಿಸ್ಮಯ ನ್ಯೂಸ್, ಕುಮಟಾ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button