ಶಿರಸಿ: ಹಲವು ಅಪರಾಧ ಚಟುವಟಿಕೆಗಳಲ್ಲಿ ತಮ್ಮ ಚುರುಕಿನ ಕಾರ್ಯಚಟುವಟಿಕೆಯಿಂದ ಆರೋಪಿಗಳನ್ನ ಬಂಧಿಸುವಲ್ಲಿ ಯಶಸ್ವಿಯಾದ ಕಳೆದ ಒಂದು ವರ್ಷದಿಂದ ಶಿರಸಿ ವೃತ್ತ ನಿರೀಕ್ಷಕರಾಗಿ ದಕ್ಷತೆಯಿಂದ ಕಾರ್ಯನಿರ್ವಹಿಸುತ್ತಿರುವ ರಾಮಚಂದ್ರ ನಾಯಕರಿಗೆ ಪೊಲೀಸ್ ಇಲಾಖೆ ನೀಡುವ ಅತ್ಯುನ್ನತ ಗೌರವ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿದ್ದಾರೆ. ಮೂಲತಃ ಅಂಕೋಲಾ ತಾಲೂಕಿನ ಅಗ್ರಗೋಣ ನಿವಾಸಿಯಾಗಿರುವ ರಾಮಚಂದ್ರ ನಾಯಕ 2005ರಲ್ಲಿ ಪಿಎಸ್‌ಐ ಆಗಿ ಇಲಾಖೆಯಲ್ಲಿ ಸೇವೆಯನ್ನ ಪ್ರಾರಂಭಿಸಿದರು.
ಮೈಸೂರಿನಲ್ಲಿ ಒಂದು ವರ್ಷ ತರಬೇತಿಯನ್ನ ಪಡೆದು ನಂತರ ಚಿಕ್ಕಮಗಳೂರು ಜಿಲ್ಲೆಯ ಕಡೂರು, ಚಿಕ್ಕಮಗಳೂರು, ಹಾಗೂ ಕಳಸ ಠಾಣೆಯಲ್ಲಿ ಪಿ.ಎಸ್.ಐ ಆಗಿ ಸೇವೆ ಸಲ್ಲಿಸಿದರು. 2016ರಲ್ಲಿ ವೃತ್ತ ನಿರೀಕ್ಷಕರಾಗಿ ಪದೋನ್ನತಿಯನ್ನ ಹೊಂದಿದ ನಂತರ ಕುಮಟಾದ ಕರಾವಳಿ ಕಾವಲು ಪಡೆ, ಉಡುಪಿಯಲ್ಲಿ ಲೋಕಾಯುಕ್ತ ಇನ್‌ಸ್ಪೆಕ್ಟರ್ ಹಾಗೂ ತರಿಕೆರೆ ಠಾಣೆಯಲ್ಲಿ ವೃತ್ತ ನಿರೀಕ್ಷಕರಾಗಿ ಸೇವೆ ಸಲ್ಲಿಸಿದರು.
ಏಪ್ರಿಲ್ 2ರಂದು ಪೊಲೀಸ್ ಧ್ವಜ ದಿನಾಚರಣೆಯ ನಿಮಿತ್ತ ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಂದ ಪ್ರಶಸ್ತಿಯನ್ನ ಸ್ವೀಕರಿಸಲಿದ್ದಾರೆ.
ವಿಸ್ಮಯ ನ್ಯೂಸ್, ಶಿರಸಿ
ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.