ಗಮನಸೆಳೆದ ಚಕ್ರಚಂಡಿಕೆ ಯಕ್ಷಗಾನ ಬಯಲಾಟ ಕಾರ್ಯಕ್ರಮ

ಹೊನ್ನಾವರ: ಯಕ್ಷಗಾನ ಕಲಾವಿದರು ನಮ್ಮ ಸಾಂಸ್ಕ್ರತಿಕ ರಾಯಭಾರಿಗಳಾಗಿದ್ದು, ಕಲೆ ಹಾಗೂ ಕಲಾವಿದರನ್ನು ಗೌರವಿಸಿ, ಪೊತ್ಸಾಹಿಸುವ ಕಾರ್ಯ ಮಾಡಬೇಕಿದೆ ಎಂದು ಮಾಜಿ.ಜಿ.ಪಂ.ಸದಸ್ಯ ಶಿವಾನಂದ ಹೆಗಡೆ ಕಡತೋಕಾ ಹೇಳಿದರು. ತಾಲೂಕಿನ ಕಾಶಿಕೆರೆ ಬೊಂಡಕಾರ ದೇವಾಲಯದ ಬಯಲಿನಲ್ಲಿ ಚಕ್ರಚಂಡಿಕೆ ಯಕ್ಷಗಾನ ಬಯಲಾಟ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಪ್ರತಿವರ್ಷವು ಈ ಭಾಗದಲ್ಲಿ ದೇವರ ಸೇವೆಯ ಜೊತೆ ಕಲಾ ಸೇವೆಯ ಮೂಲಕ ಕಲಾವಿದರನ್ನು ಗುರುತಿಸಿ ಗೌರವಿಸುವ ಕಾರ್ಯ ಮಾಡುತ್ತಿದ್ದಾರೆ. ಯಕ್ಷಗಾನ ಕನ್ನಡ ಭಾಷೆ ಮತ್ತು ಸಂಸ್ಕøತಿ ಪರಿಚಯಿಸುವ ಕಾರ್ಯ ಮಾಡುತ್ತಿದೆ ಎಂದು ಪ್ರಸಂಸೆ ವ್ಯಕ್ತಪಡಿಸಿದರು.

ಶ್ರೀ ಕರಿಕಾನ ಪರಮೇಶ್ವರಿ ದೇವಾಲಯದ ಪ್ರಧಾನ ಅರ್ಚಕರಾದ ವೇ. ಸುಬ್ರಹ್ಮಣ್ಯ ಭಟ್ ಕಾರ್ಯಕ್ರಮ ಉದ್ಘಾಟಿಸಿ ಸಂಘಟನೆಯ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿ, ಶುಭಕೋರಿದರು. ಯಕ್ಷಗಾನದ ಹಾಸ್ಯ ಕಲಾವಿದರಾದ ಶ್ರೀಧರ ಹೆಗಡೆ ಕಾಸರಕೋಡ್ ಇವರನ್ನು ಇದೇ ಸಂದರ್ಭದಲ್ಲಿ ವೇದಿಕೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ದೇವಾಲಯದ ಅರ್ಚಕರಾದ ಮಂಜುನಾಥ ಭಟ್, ಗ್ರಾ.ಪಂ.ಉಪಾಧ್ಯಕ್ಷ ಕಿರಣ ಹೆಗಡೆ, ಸದಸ್ಯ ಬಾಲಚಂದ್ರ ನಾಯ್ಕ, ಉದ್ದಿಮೆದಾರರಾದ ಎಸ್.ಕೆ.ನಾಯ್ಕ, ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ಎನ್.ಎಲ್.ಹೆಗಡೆ, ರಾಘವ ಹೆಗಡೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಬಳಿಕ ವಿವಿಧ ಕಲಾವಿದರ ಕೂಡುವಿಕೆಯಲ್ಲಿ ಚಕ್ರಚಂಡಿಕಾ ಯಕ್ಷಗಾನ ಪ್ರದರ್ಶನಗೊಂಡಿತು.

ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ, ಹೊನ್ನಾವರ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Exit mobile version