ಕಾರವಾರ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವತಿಯಿಂದ ಈಗಾಗಲೇ ದಿನನಿತ್ಯ ನಿಯಮಿತವಾಗಿ ಸಂಚರಿಸುವ ಎಲ್ಲ ಸಾರ್ವಜನಿಕ ಪ್ರಯಾಣಿಕರ ಹಿತದೃಷ್ಠಿಯಿಂದ ಮಾಸಿಕ ರಿಯಾಯಿತಿ ಬಸ್ ಪಾಸ್ ಗಳನ್ನು ಸಂಸ್ಥೆಯ ವ್ಯಾಪ್ತಿಯ ಎಲ್ಲಾ ವಿಭಾಗಗಳಲ್ಲಿ ವಿತರಿಸಲಾಗುತ್ತಿದೆ. ಪ್ರಸ್ತುತವಾಗಿ ಕೆಲವು ಮಾರ್ಗಗಳಲ್ಲಿ ಹೊಸದಾಗಿ ಟೋಲ್‌ಗಳು ಪ್ರಾರಂಭವಾಗಿರುವುದರಿAದ ಟಿಕೇಟ್ ಪಡೆದು ಪ್ರಯಾಣಿಸುವ ಪ್ರಯಾಣಿಕರಿಗೆ ಟೋಲ್ ಶುಲ್ಕ ಸೇರಿ ಟಿಕೇಟ್ ದರಗಳು ಅನ್ವಯವಾಗುತ್ತದೆ.
ಸದರಿ ಮಾಸಿಕ ರಿಯಾಯಿತಿ ಬಸ್ ಪಾಸ್‌ಗಳನ್ನು ಸಾರ್ವಜನಿಕ ಪ್ರಯಾಣಿಕರು ಒಟ್ಟಾರೆ ಒಂದು ತಿಂಗಳು ಟಿಕೇಟ್ ಪಡೆದು ಪ್ರಯಾಣಿಸಿದಲ್ಲಿ ತಗಲುವ ವೆಚ್ಚಕ್ಕೆ ಹೋಲಿಸಲಾಗಿ ಕನಿಷ್ಠ ಶೇ45 ರಿಂದ ಶೇ46ರಷ್ಠು ಪ್ರಯಾಣದ ವೆಚ್ಚದಲ್ಲಿ ಉಳಿತಾಯವಾಗುತ್ತದೆ. ಮಾಸಿಕ ರಿಯಾಯಿತಿ ಬಸ್ ಪಾಸುಗಳ ಕುರಿತು ಏನಾದರೂ ಅಹವಾಲುಗಳಿದ್ದಲ್ಲಿ ದೂರವಾಣಿ ಸಂಖ್ಯೆ 7760998003 ಗೆ ಸಂಪರ್ಕಿಸಬಹುದಾಗಿದೆ.
ಸುಗಮ ಹಾಗೂ ಸುರಕ್ಷಿತ ಪ್ರಯಾಣಕ್ಕಾಗಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿಯೇ ಪ್ರಯಾಣಿಸುವಂತೆ ಮತ್ತು ಪ್ರಯಾಣಿಕರು ಸದರಿ ಮಾಸಿಕ ರಿಯಾಯಿತಿ ಬಸ್ ಪಾಸ್ ಸೇವೆಯ ಸದುಪಯೋಗ ಪಡೆದುಕೊಂಡು ಸಂಸ್ಥೆಯೊoದಿಗೆ ಸಹಕರಿಸುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಸ್ಮಯ ನ್ಯೂಸ್, ಕಾರವಾರ
ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.