ಯಲ್ಲಾಪುರ: ಹಿಂದೂಗಳ ಹೊಸ ವರ್ಷ ಯುಗಾದಿ ಪ್ರಯುಕ್ತ ಪಟ್ಟಣದಲ್ಲಿ ನಡೆದ ಭವ್ಯ ಶೋಭಾ ಯಾತ್ರೆಗೆ 10 ಸಾವಿರಕ್ಕೂ ಅಧಿಕ ಜನ ಸಾಕ್ಷಿಯಾದರು. ಯುಗಾದಿ ಉತ್ಸವ ಸಮಿತಿಯಿಂದ ಅಂಬೇಡ್ಕರ್ ನಗರದಲ್ಲಿರುವ ಕೋಟೆ ಕರಿಯವ್ವ ದೇವಸ್ಥಾನದಲ್ಲಿ 3.45 ಕ್ಕೆ ಪೂಜೆ ಸಲ್ಲಿಸುವ ಮೂಲಕ ಶೋಭಾ ಯಾತ್ರೆಗೆ ಚಾಲನೆ ನೀಡಲಾಯಿತು.
ಶೋಭಾಯಾತ್ರೆಯಲ್ಲಿ ಭಾಗವಹಿಸಿ ವಿವಿಧ ಜಾನಪದ ತಂಡಗಳು, ಟ್ಯಾಬ್ಲೋಗಳು ಶೋಭಾ ಯಾತ್ರೆಯ ಮೆರಗನ್ನು ಹೆಚ್ಚಿಸಿದವು. ಮಹಿಳೆಯರಿಗೆ ಹಾಗೂ ಪುರುಷರಿಗೆಂದು ಪ್ರತ್ಯೇಕ ಡಿಜೆ ವ್ಯವಸ್ಥೆ ಮಾಡಿದ್ದರಿಂದ, ಹಿಂದುತ್ವದ ಹಾಡುಗಳಿಗೆ ಹುಚ್ಚೆದ್ದು ಕುಣಿದರು. ಮೆರವಣಿಗೆ ದಾರಿಯುದ್ದಕ್ಕೂ ಕಿಕ್ಕೆರೆದು ಸೇರಿದ್ದ ಜನಸ್ತೋಮ, ರಸ್ತೆಯ ಅಕ್ಕಪಕ್ಕದಲ್ಲಿ ಕಟ್ಟಡದ ಮೇಲ್ಭಾಗಗಳಲ್ಲಿ ನಿಂತು ಶೋಭಾ ಯಾತ್ರೆಯನ್ನು ವೀಕ್ಷಿಸಿದರು.
ವಿಸ್ಮಯ ನ್ಯೂಸ್, ಯಲ್ಲಾಪುರ
ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.