ಯಲ್ಲಾಪುರ: ರಸ್ತೆ ಬದಿಯಲ್ಲಿ ಚಿರತೆಯೊಂದು ಬೇಟೆಗಾರರ ಗುಂಡೇಟಿಗೆ ಬಲಿಯಾಗಿದ್ದು ಬೆಳಕಿಗೆ ಬಂದಿದೆ. ಆನಗೋಡ-ಬೀಸಗೋಡ ರಸ್ತೆಯ ಬದಿಯಲ್ಲಿ ಚಿರತೆಯೊಂದು ಅಸಹಜ ಸಾವನಪ್ಪಿರುವುದನ್ನು ಕಂಡ ಸಾರ್ವಜನಿಕರು ಅರಣ್ಯ ಇಲಾಖೆಯ ಸಿಬ್ಬಂದಿಗೆ ತಿಳಿಸಿದ್ದರು. ಬಿಸಗೋಡ ಅರಣ್ಯ ಶಾಖೆಯ ಮೋಜಣದಾರ ಸುನೀಲ ಜಂಗಮಶೆಟ್ಟಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ನಂತರ ಚಿರತೆಯ ಕಳೆಬರವನ್ನು ಯಲ್ಲಾಪುರ ವಲಯ ಕಚೇರಿ ಆವರಣಕ್ಕೆ ತಂದರು.
ನ್ಯಾಯಾಲಯದ ಆದೇಶದಂತೆ ತಾಲೂಕು ಪಶು ವೈದ್ಯಾಧಿಕಾರಿ ಡಾ. ಸುಬ್ರಾಯ ಭಟ್ಟರನ್ನು ಕರೆಸಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಸುಮಾರು 3-4 ವರ್ಷದ ಚಿರತೆಯು ಗರ್ಭಿಣಿಯಾಗಿದ್ದು, ಬೆಳಗಿನ ಜಾವ ಗುಂಡೇಟಿನಿoದ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ನಂತರ ಉಪ ಅರಣ್ಯ ಸಂರಕ್ಷಣಾಧಿಕಾರಿ ಗೋಪಾಲಕೃಷ್ಣ ಹೆಗಡೆ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಆನಂದ ಹೆಚ್.ಎ. ವಲಯ ಅರಣ್ಯಾಧಿಕಾರಿ ಬಾಲಸುಬ್ರಹ್ಮಣ್ಯಂ ಅವರ ಸಮ್ಮುಖದಲ್ಲಿ ದಹನ ಪ್ರಕ್ರಿಯೆ ನಡೆಯಿತು. ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಮೊಕದ್ದಮೆ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.
ವಿಸ್ಮಯ ನ್ಯೂಸ್, ಯಲ್ಲಾಪುರ
ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.