ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ತೆರಳುತ್ತಿದ್ದಾಗ ಎದುರಿಗೆ ಪ್ರತ್ಯಕ್ಷವಾದ ಚಿರತೆ: ಗ್ರಾಮಸ್ಥರಲ್ಲಿ ಆತಂಕ

ಶಿರಸಿ: ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ತಮ್ಮ ಸ್ವಗ್ರಾಮ ಕಾಗೇರಿಗೆ ತೆರಳುತ್ತಿರುವಾಗ ಚಿರತೆಯೊಂದು ಎದುರಾದ ಘಟನೆ ನಡೆದಿದೆ. ತಡರಾತ್ರಿ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಕಾರಿನಲ್ಲಿ ಮನೆಗೆ ಮರಳುತ್ತಿದ್ದಾಗ ರಸ್ತೆಯ ಪಕ್ಕ ಕಾಗೇರಿಯಲ್ಲಿ ಚಿರತೆ ಕಾಣಿಸಿಕೊಂಡಿದೆ. ಕಾಗೇರಿಯವರ ಕಾರು ಚಾಲಕ ಚಿರತೆಯ ಫೋಟೋವನ್ನು ಸೆರೆಹಿಡಿದಿದ್ದಾರೆ.

ಊರಿನಲ್ಲಿ ಚಿರತೆ ಕಾಣಿಸಿಕೊಂಡ ಸುದ್ದಿ ಕೇಳಿ ಗ್ರಾಮಸ್ಥರು ಆತಂಕಗೊoಡಿದ್ದಾರೆ. ಈಗಾಗಲೇ ಅರಣ್ಯ ಇಲಾಖೆಗೆ ವಿಷಯ ತಿಳಿಸಲಾಗಿದ್ದು, ಚಿರತೆಯನ್ನು ಪತ್ತೆ ಹಚ್ಚಿ ಹೊರ ಪ್ರದೇಶಕ್ಕೆ ಕಳುಹಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ವಿಸ್ಮಯ ನ್ಯೂಸ್, ಶಿರಸಿ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Exit mobile version