ಉರುಳಿನಲ್ಲಿ ಸಿಕ್ಕಿಬಿದ್ದ ಕರಡಿಯ ರಕ್ಷಿಸಿದ ಅರಣ್ಯಾಧಿಕಾರಿಗಳು

ಕಾರವಾರ: ಕಾಡಿನಲ್ಲಿ ಹಾಕಿದ್ದ ಉರುಳೊಂದಕ್ಕೆ ಕರಡಿ ಸಿಲುಕಿಕೊಂಡು ಪ್ರಾಣ ಉಳಿಸಿಕೊಳ್ಳಲು ಪರದಾಡಿದ ಘಟನೆ ಮುಂಡಗೋಡ ತಾಲೂಕಿನ ಕಾತೂರ ವಲಯದ ಪಾಳಾ ಶಾಖೆಯ ಒರಲಗಿ ಕಾಡಿನಲ್ಲಿ ನಡೆದಿದೆ.

ಒರಲಗಿ ಬಳಿ ಯಾರೊ ಕಾಡಿನಲ್ಲಿ ಉರುಳು ಹಾಕಿದ್ದು ಇದಕ್ಕೆ ಕರಡಿ ಸಿಕ್ಕು ಬಿದ್ದು ಒದ್ದಾಡತೊಡಗಿತ್ತು. ಇದನ್ನು ಗಮನಿಸಿದ ಗ್ರಾಮಸ್ಥರು ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದ್ದರು. ಅದರಂತೆ ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಅಧಿಕಾರಿಗಳು ಪರಿಶೀಲನೆ ನಡೆಸಿ ಪಶುವೈದ್ಯರ ಮೂಲಕ ಅರವಳಿಕೆ ಮದ್ದು ನೀಡಿದ್ದರು.

ಇದರಿಂದ ಕರಡಿ ಪ್ರಜ್ಞೆ ತಪ್ಪಿದ್ದು, ಕರಡಿಯನ್ನು ಉರುಳಿನಿಂದ ಬಿಡಿಸಿ ಬಚಾವ್ ಮಾಡಲಾಗಿದೆ‌. ಅಲ್ಲದೆ ಕರಡಿ ಎಚ್ಚರವಾಗುವ ಮುನ್ನವೇ ಅದನ್ನು ಸುರಕ್ಷಿತವಾಗಿ ಅರಣ್ಯಕ್ಕೆ ತೆರಳುವಂತೆ ವ್ಯವಸ್ಥೆ ಮಾಡಿದ್ದಾರೆ.

ವಿಸ್ಮಯ ನ್ಯೂಸ್ ಕಾರವಾರ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Exit mobile version