ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ: ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ಬ್ಯಾಂಕ್ ಉದ್ಯೋಗಿ ಸ್ಥಳದಲ್ಲೇ ದುರ್ಮರಣ

ಕಾರವಾರ: ಎರಡು ಬೈಕ್ ಗಳ ನಡುವೆ ಮುಖಾಮುಖಿ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತ ಪಟ್ಟಿರುವ ಘಟನೆ ತಾಲೂಕಿನಶೇಜವಾಡ ಬಳಿ ನಡೆದಿದೆ. ಮೃತಪಟ್ಟ ವ್ಯಕ್ತಿ ಇಲ್ಲಿನ ಖಾಸಗಿ ಬ್ಯಾಂಕ್ ಒಂದರಲ್ಲಿ ಉದ್ಯೊಗಿಯಾಗಿದ್ದು, ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಅಪಘಾತದಲ್ಲಿ ಮೃತಪಟ್ಟ ಬೈಕ್ ಸವಾರನನ್ನು ನರೇಂದ್ರ ಎಂದು ಗುರುತಿಸಲಾಗಿದೆ.

ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ನರೇಂದ್ರ ಅವರು ತೀವ್ರ ರಕ್ತಸ್ರಾವ ಉಂಟಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ನರೇಂದ್ರ ಅತ್ಯುತ್ತಮ ಫೋಟೋ ಗ್ರಾಫರ್ ಸಹ ಆಗಿದ್ದು ಬಿಡುವಿನ ಸಮಯ ದಲ್ಲಿ ಫೋಟೋಗ್ರಾಫಿ ಮಾಡುತ್ತಿದ್ದ. ಈ ಬಗ್ಗೆ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಕಾರವಾರ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Exit mobile version