ಕಾರವಾರ: ಹಂದಿಗೆ ಹಾಕಿದ್ದ ಉರುಳಿಗೆ ಚಿರತೆಯೊಂದು ಸಿಲುಕಿ ಸಾವನಪ್ಪಿರುವ ಘಟನೆ ಹೊನ್ನಾವರ ತಾಲ್ಲೂಕಿನ ಕವಲಕ್ಕಿ ಸಮೀಪದ ಮಾಸುಕಲ್ಮಕ್ಕಿ ಬಳಿ ಬೆಳಕಿಗೆ ಬಂದಿದೆ.ಮೃತಪಟ್ಟ ಚಿರತೆ ಅಂದಾಜು ಒಂದು ವರ್ಷದ ಹೆಣ್ಣು ಚಿರತೆಯಾಗಿದೆ.
ಜಮೀನಿಗೆ ಕಾಡುಪ್ರಾಣಿಗಳ ಹಾವಳಿ ತಡೆಯಲೋ ಅಥವಾ ಕಾಡುಪ್ರಾಣಿ ಭೇಟೆಯಾಡಲೂ ತಂತಿಯಿಂದ ಸುತ್ತಿದ್ದ ನಳಿಕೆಗೆ ಚಿರತೆ ಸಿಲುಕಿ ಸಾವನ್ನಪ್ಪಿದೆ. ಸ್ಥಳಕ್ಕೆ ಡಿ.ಎಫ್.ಓ ರವಿಶಂಕರ್ ಹಾಗೂ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಜಾಗದ ಮಾಲೀಕರಿಂದ ಮಾಹಿತಿ ಪಡೆದು ತನಿಖೆ ನಡೆಸಿ ಪ್ರಕರಣ ದಾಖಲಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ತಾಲೂಕಿನ ಮುಗ್ವಾ, ಹೊಸಾಕುಳಿ, ಸಾಲ್ಕೋಡ್ ಭಾಗದಲ್ಲಿ ಈ ಹಿಂದೆ ಚಿರತೆ ಕಾಣಿಸಿಕೊಂಡಿತ್ತು. ಅಲ್ಲದೇ ನಾಯಿ ಆಕಳುಗಳನ್ನು ಭೇಟಿಯಾಡಿದೆ ಎಂದು ಕಾಡು ಪ್ರಾಣಿಗಳನ್ನು ನಿಯಂತ್ರಣ ಮಾಡುವಂತೆ ಸಾರ್ವಜನಿಕರು ಅಧಿಕಾರಿಗಳಿಗೆ ಮನವಿ ಮಾಡಿದ್ದರು. ಇದೀಗ ಮರಿ ಚಿರತೆ ಮೃತಪಟ್ಟಿದ್ದರೂ ಸಾರ್ವಜನಿಕರಲ್ಲಿ ಆತಂಕ ದೂರವಾಗಿಲ್ಲ. ಅಧಿಕಾರಿಗಳು ಕಾಡಿನಿಂದ ನಾಡಿನತ್ತ ಮುಖ ಮಾಡುವ ಪ್ರಾಣಿಗಳನ್ನು ಪುನಃ ಕಾಡಿಗೆ ಕಳುಹಿಸಬೇಕು ಎಂದು ರೈತರು ಒತ್ತಾಯಿಸುತ್ತಿದ್ದಾರೆ.
ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ, ಹೊನ್ನಾವರ
ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.