Important
Trending

ಈತನ ಸುಳಿವು ಸಿಕ್ಕಲ್ಲಿ ಮಾಹಿತಿ ನೀಡುವಂತೆ ಮನವಿ

ಅಂಕೋಲಾ: ಗಾವಡಿ ಕೆಲಸಕ್ಕೆ ಹೋಗಿ ಬರುವುದಾಗಿ ಹೇಳಿ ಹೋದ ಯುವಕ ಮನೆಗೆ ಮರಳದೇ, ಆತನ ಪತ್ತೆ ಮಾಡಿ ಕೊಡುವಂತೆ ಕುಟುಂಬಸ್ಥರು ಪೋಲೀಸರ ಮೋರೆ ಹೋದ ಘಟನೆ ಅಂಕೋಲಾ ತಾಲೂಕಿನ ವಾಸರಕುದ್ರಿಗೆ ಗ್ರಾಮದಲ್ಲಿ ಸಂಭವಿಸಿದೆ. ವಾಸರಕುದ್ರಿಗೆ ನಿವಾಸಿ ರಾಘವೇಂದ್ರ ಗಣಪತಿ ಆಗೇರ (22) ಕಾಣೆಯಾದ ವ್ಯಕ್ತಿ.

ಏಪ್ರಿಲ್ 5 ರಂದು ಕೆಲಸಕ್ಕೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೊರಗೆ ಹೋದವನು ಇದುವರೆಗೆ ಮರಳಿ ಬಂದಿಲ್ಲ ಎಂದು ಆತನ ತಾಯಿ ಚಿನ್ನಿ ಗಣಪತಿ ಆಗೇರ ಅಂಕೋಲಾ ಪೊಲೀಸ್ ಠಾಣೆಯಲ್ಲಿ  ದೂರು ದಾಖಲಿಸಿದ್ದಾರೆ. ಆತ ಎಲ್ಲಿಯಾದರೂ ಕಂಡು ಬಂದಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ವಿಸ್ಮಯ ನ್ಯೂಸ ವಿಲಾಸ ನಾಯಕ ಅಂಕೋಲಾ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button