ನೀರಿನ ಪಂಪ್ ಚಾಲು ಮಾಡಲು ತೆರಳಿದ ವೇಳೆ ಅವಾಂತರ: ನದಿಯಲ್ಲಿ ಬಿದ್ದು ಬಾಲಕಿ ಸಾವು

ಕುಮಟಾ: ಅಡಿಕೆ ತೋಟಕ್ಕೆ ನೀರು ಹಾಯಿಸಲು ಅಘನಾಶಿನಿ ನದಿಗೆ ಜೋಡಿಸಿದ ನೀರಿನ ಪಂಪ್ ಚಾಲು ಮಾಡಲು ತೆರಳಿದ ವೇಳೆ ಅವಾಂತರ ನಡೆದಿದೆ. ಹೌದು, ಆಕಸ್ಮಿಕವಾಗಿ ಕಾಲು ಜಾರಿ ನದಿಯಲ್ಲಿ ಬಿದ್ದು ಬಾಲಕಿಯೋರ್ವಳು ಆಕಸ್ಮಿಕವಾಗಿ ಕಾಲು ಜಾರಿ ಅಘನಾಶಿನಿ ನದಿಗೆ ಬಿದ್ದು ಮುಳುಗಿ ಮೃತಪಟ್ಟ ಘಟನೆ ತಾಲೂಕಿನ ಹೊಸಳ್ಳಿಯಲ್ಲಿ ಸಂಭವಿಸಿದೆ.

ಕುಮಟಾ ತಾಲೂಕಿನ ಕಲ್ಲಬ್ಬೆಗ್ರಾಪಂ ವ್ಯಾಪ್ತಿಯ ಹೊಸಳ್ಳಿಯ ಇಂದಿರಾ ಶಂಕರ ಗೌಡ (12) ಮೃತ ಬಾಲಕಿ. ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾಳೆ ಎಂದು ಆಕೆಯ ತಂದೆ ಶಂಕರ ಗೌಡ ಕುಮಟಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ವಿಸ್ಮಯ ನ್ಯೂಸ್, ಕುಮಟಾ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Exit mobile version