Join Our

WhatsApp Group
Focus News
Trending

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚರಂಡಿಗೆ ಬಿದ್ದ ಕಾರು: ಓರ್ವ ಗಾಯ

ಹಳಿಯಾಳ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾಗಿ ಓರ್ವ ಗಾಯಗೊಂಡ ಘಟನೆ ತಾಲ್ಲೂಕಿನ ಬೇಡರ ಶಿರಗೂರಿನಲ್ಲಿ ನಡೆದಿದೆ. ಅತಿಯಾದ ವೇಗದ ಚಾಲನೆಯಿಂದಾಗಿ ನಿಯಂತ್ರಣ ತಪ್ಪಿ ಬೇಡರಶಿರಗೂರು ಕ್ರಾಸ್ ಹತ್ತಿರ ರಾಜ್ಯ ಹೆದ್ದಾರಿಯ ಬಲ ಬದಿಯಲ್ಲಿರುವ ಚರಂಡಿಗೆ ಉರುಳಿ ಬಿದ್ದಿದೆ. ಬಿದ್ದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊoಡಿದೆ..

ಧಾರವಾಡದಿಂದ ಗಣೇಶಗುಡಿಗೆ ಹೋಗಲೆಂದು ಬಂದಿದ್ದ ಧಾರವಾಡ ತಾಲೂಕಿನ ನಿರ್ಮಲನಗರದ 10ನೇ ಕ್ರಾಸ್ ನಿವಾಸಿ ಮಾನಸ ಗುಂಜಟ್ಟಿ ಎಂಬಾತ ಕಾರೊಂದರಲ್ಲಿ ಬರುತ್ತಿದ್ದಾಗ ಅತಿಯಾದ ವೇಗದ ಚಾಲನೆಯಿಂದಾಗಿ ನಿಯಂತ್ರಣ ತಪ್ಪಿ ಬೇಡರಶಿರಗೂರು ಕ್ರಾಸ್ ಹತ್ತಿರ ರಾಜ್ಯ ಹೆದ್ದಾರಿಯ ಬಲ ಬದಿಯಲ್ಲಿರುವ ಚರಂಡಿಗೆ ಉರುಳಿ ಬಿದ್ದಿದೆ. ಈ ಸಂದರ್ಭದಲ್ಲಿ ಕಾರಿನಲ್ಲಿದ್ದ ಹುಬ್ಬಳ್ಳಿಯ ದಾಜಿಬಾನ್ ಪೇಟೆಯ ಗೌಳಿಗಲ್ಲಿಯ 2ನೇ ಕ್ರಾಸ್ ನಿವಾಸಿ ಶ್ರೇಯಸ್ ಇಂಗಳೆ ಎಂಬಾತನಿಗೆ ಗಾಯವಾಗಿದೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ

Back to top button