Follow Us On

WhatsApp Group
Big News
Trending

ಬೃಹತ್ ಉದ್ಯೋಗ ಮೇಳ: 500ಕ್ಕೂ ಹೆಚ್ಚು ಉದ್ಯೋಗಾವಕಾಶ: ಆಕರ್ಷಕ ವೇತನದೊಂದಿಗೆ ಇಎಸ್‌ಐ, ಪಿಎಫ್ ಸೌಲಭ್ಯ

ಕುಮಟಾ: ಶಿಕ್ಷಕ-ಶಿಕ್ಷಕಿಯರ ಬೃಹತ್ ಉದ್ಯೋಗ ಮೇಳ, ಏಪ್ರಿಲ್ 24 ರಂದು ಬೆಳಿಗ್ಗೆ 9.30ಕ್ಕೆ ಕುಮಟಾದ ಕಮಲಾ ಬಾಳಿಗಾ ಶಿಕ್ಷಣ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದೆ. 200ಕ್ಕಿಂತ ಹೆಚ್ಚು ಖಾಸಗಿ ಹಾಗು ಅನುದಾನಿತ ಪ್ರಾಥಮಿಕ, ಪ್ರೌಢ ಹಾಗು ಕಾಲೇಜು ಶಿಕ್ಷಣ ಸಂಸ್ಥೆಯಲ್ಲಿ ಉದ್ಯೋಗಾವಕಾಶವಿದೆ. ©Copyright reserved by Vismaya tv. ಉಚಿತ ಊಟ, ವಸತಿ, ರಜಾ ಸೌಲಭ್ಯದೊಂದಿಗೆ ವೇತನ, ಇಎಸ್‌ಐ, ಪಿಎಫ್ ಜೊತೆ 9 ಸಾವಿರದಿಂದ ಸರ್ಕಾರ ನಿಗದಿಪಡಿಸಿದ ವೇತನ ನೀಡಲಾಗುವುದು. ಉದ್ಯೋಗ ಪಡೆಯಲು ಯಾವುದೇ ಶುಲ್ಕವಿಲ್ಲವಾಗಿದ್ದು, 500ಕ್ಕಿಂತ ಹೆಚ್ಚು ಉದ್ಯೋಗದ ಅವಕಾಶಗಳಿವೆ.

ಕೆನರಾ ಕಾಲೇಜು ಸೊಸೈಟಿ ಕಮಲಾ ಬಾಳಿಗಾ ಶಿಕ್ಷಣ ಮಹಾವಿದ್ಯಾಲಯ, ಕುಮಟಾ, ಉತ್ತರಕನ್ನಡ ಜಿಲ್ಲಾ ಶಿಕ್ಷಕ-ಶಿಕ್ಷಕಿಯರ ನಿರಂತರ ಸಹಾಯವಾಣಿ ಶಿರಸಿ, ಕರ್ನಾಟಕ ರಾಜ್ಯ ಖಾಸಗಿ ಶಾಲಾ ಶಿಕ್ಷಕರ ಹಾಗು ಶಿಕ್ಷಕೇತರ ಒಕ್ಕೂಟ ಸಹಯೋಗದಲ್ಲಿ ಈ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಇದೇ ವೇಳೆ ಅತ್ಯುತ್ತಮ ಶಿಕ್ಷಣ ಸಂಸ್ಥೆ ಮತ್ತು ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9880179177, 7483382074, 994820585

ಬ್ಯೂರೋ ರಿಪೋರ್ಟ್, ವಿಸ್ಮಯ ನ್ಯೂಸ್

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button