Important
Trending

6 ತಿಂಗಳ ಹಸುಗೂಸಿಗೆ ವಿಷ ನೀಡಿ ತಾನು ಆತ್ಮಹತ್ಯೆ ಮಾಡಿಕೊಂಡ ತಾಯಿ? ಕೌಟುಂಬಿಕ ಕಲಹ ಕಾರಣವೇ?

ಶಿರಸಿ: ತಾಯಿಯೊಬ್ಬಳು ತನ್ನ 6 ತಿಂಗಳ ಹಸುಗೂಸಿನೊಂದಿಗೆ ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ ಹುಲೇಕಲ್ ಬಳಿಯ ಕಮಟಗಿಯಲ್ಲಿ ನಡೆದಿದೆ. ಕೌಟುಂಬಿಕ ಕಲಹವೇ ಈ ಸಾವಿಗೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ತಾಯಿ ಅಶ್ವಿನಿ ಮಂಜುನಾಥ್ ಚೆನ್ನಯ್ಯ (28) ಹಾಗೂ ಮಗನಾದ ಸಾತ್ವಿಕ ಚನ್ನಯ್ಯ ಮೃತಪಟ್ಟವರು ಎಂದು ತಿಳಿದುಬಂದಿದೆ. ಮಗನಿಗೆ ವಿಷಯ ನೀಡಿ, ಸಾಯಿಸಿರುವ ಶಂಕೆ ವ್ಯಕ್ತವಾಗಿದೆ. ಶಿರಸಿ ಗ್ರಾಮೀಣ ಪೋಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದ್ದು, ತನಿಖೆ ಆರಂಭಿಸಿದ್ದಾರೆ. ಹೆಚ್ಚಿನ ಮಾಹಿತಿ ತನಿಖೆಯಿಂದ ತಿಳಿದುಬರಬೇಕಿದೆ.

ವಿಸ್ಮಯ ನ್ಯೂಸ್, ಶಿರಸಿ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button