ದಾಂಡೇಲಿ: ಗಾಂಜಾವನ್ನು ವಶಪಡಿಸಿಕೊಂಡು ಇಬ್ಬರು ವ್ಯಕ್ತಿಗಳನ್ನು ಮಾಲು ಸಹಿತ ಬಂಧಿಸಿದ ಘಟನೆ ನಗರದ ಹಳಿಯಾಳ ರಸ್ತೆಯಲ್ಲಿರುವ ಕಾಗದ ಕಾರ್ಖಾನೆಯ ಒಂದನೇ ಗೇಟ್ ಹತ್ತಿರ ನಡೆದಿದೆ. ಆರೋಪಿಗಳು ಹಾವೇರಿಯವರು ಎಂದು ತಿಳಿದುಬಂದಿದ್ದು, ತೌಸೀಫ್ ಅಹಮ್ಮದ್ ಮತ್ತು ಅಸ್ಲಂ ಅಬ್ದುಲ್ ಎಂಬ ಇಬ್ಬರನ್ನು ಪ್ರಕರಣಕ್ಕೆ ಸಂಬoಧಪಟ್ಟoತೆ ಬಂಧಿಸಲಾಗಿದೆ. ಆರೋಪಿಗಳು ಹಳಿಯಾಳದ ಕಡೆಯಿಂದ ದಾಂಡೇಲಿಗೆ ಕಾರೊಂದರಲ್ಲಿ ಯಾವುದೇ ಗಾಂಜಾ ಸಾಗಿಸುತ್ತಿದ್ದರು.
ಖಚಿತ ಮಾಹಿತಿ ಮೇರೆಗೆ ನಗರ ಠಾಣೆಯ ಪೊಲೀಸ್ ತಂಡ ದಾಳಿ ನಡೆಸಿ, ವಾಹನ ತಡೆದು ನಿಲ್ಲಿಸಿ ಪರಿಶೀಲಿಸಿದಾಗ ಅಕ್ರಮ ಗಾಂಜಾ ಸಾಗಾಟ ಬೆಳಕಿಗೆ ಬಂದಿದೆ. ದಾಳಿ ವೇಳೆ 60 ಸಾವಿರ ಮೌಲ್ಯದ 2 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೆ, ಗಾಂಜಾ ಸಾಗಾಟಕ್ಕೆ ಬಳಕೆ ಮಾಡಿದ ಕಾರನ್ನು ವಶಕ್ಕೆ ತೆಗೆದುಕೊಂಡು ಆರೋಪಿಗಳಿಬ್ಬರನ್ನು ಬಂಧಿಸಿ ಮುಂದಿನ ಕ್ರಮವನ್ನು ಪೊಲೀಸರು ಕೈಗೊಂಡಿದ್ದಾರೆ.
ವಿಸ್ಮಯ ನ್ಯೂಸ್ ಕಾರವಾರ
ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.