ಶಿರಸಿ: ಕರ್ನಾಟಕದ ತಿರುಪತಿ ಎಂದೇ ಪ್ರಸಿದ್ಧಿ ಪಡೆದ ಶ್ರೀ ಕ್ಷೇತ್ರ ಮಂಜುಗುಣಿಯ ಮಹಾರಥೋತ್ಸವ ವಿಜ್ರಂಭಣೆಯಿAದ ನಡೆಯಿತು. ಅಪಾರ ಭಕ್ತರು ರಥಾರೂಢನಾದ ಶ್ರೀ ವೇಂಕಟರಮಣನ ದರ್ಶನ ಪಡೆದು ಭಕ್ತರು ಪುನೀತರಾದರು. ಸಾವಿರಾರು ಸಂಖ್ಯೆಯಲ್ಲಿ ಸೇರಿದ ಭಕ್ತ ಸಮೂಹ ಶ್ರೀದೇವರ ರಥೋತ್ಸವ ದಲ್ಲಿ ಪಾಲ್ಗೊಂಡು ಭಕ್ತಿಯ ಪರಾಕಾಷ್ಠೆಯಲ್ಲಿ ಮಿಂದೆದ್ದರು.
ಆಗಮಿಸಿದ ಭಕ್ತಾದಿಗಳು ಗೋವಿಂದನ ನಾಮ ಸ್ಮರಣೆ ಯೊಂದಿಗೆ ರಥವನ್ನ ಎಳೆದು ಪುನೀತರಾದರು. ಬಳಿಕ ರಥಾರೂಢನಾದ ಶ್ರೀ ವೇಂಕಟರಮಣನ ದರ್ಶನ ಪಡೆದರು. ಹಣ್ಣು ಕಾಯಿ ಸೇವೆ ಸೇರಿದಂತೆ ವಿವಿಧ ಸೇವೆಗಳನ್ನು ಶ್ರೀ ದೇವರಿಗೆ ಸಮರ್ಪಿಸಿದರು. ಜೈಕಾರದೊಂದಿಗೆ ರಥಕ್ಕೆ ಕಡಲೆ ಬಾಳೆಹಣ್ಣು ಎಸೆದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಕ್ರಮ ಕೈಗೊಂಡಿತ್ತು.
ವಿಸ್ಮಯ ನ್ಯೂಸ್, ಶಿರಸಿ
ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.