ನಿಮಯ ಉಲ್ಲಂಘನೆ ಹಿನ್ನಲೆ: ಮುಂದಿನ ಆದೇಶದ ವರೆಗೆ ರ‍್ಯಾಪ್ಟಿಂಗ್ ಸ್ಥಗಿತ: ಜಿಲ್ಲಾಧಿಕಾರಿಗಳು ಹೇಳಿದ್ದೇನು ನೋಡಿ?

ಕಾರಾವಾರ: ಕಾಳಿನದಿಯಲ್ಲಿ ನಿಯಮ ಉಲ್ಲಂಘಿಸಿ ರಾಫ್ಟಿಂಗ್ ನಡೆಸಿ, ರಾಪ್ಟಿಂಗ್ ಬೋಟ್ ಮುಗುಚಿಬಿದ್ದ ಹಿನ್ನಲೆ ಜಿಲ್ಲಾಧಿಕಾರಿಗಳು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಗಣೇಶಗುಡಿಗೆ ಭೇಟಿ ನೀಡಿದ ವೇಳೆ ಮಾತನಾಡಿದ ಅವರು, ಮುಂದಿನ ಆದೇಶದವರೆಗೆ ರಾಫ್ಟಿಂಗ್ ಸ್ಥಗಿತಗೊಳಿಸಿದ್ದಾರೆ.

ಅಧಿಕಾರಿಗಳು ಹಾಗೂ ರಾಫ್ಟಿಂಗ್ ಮಾಲಕರು ಮತ್ತು ಗೈಡ್ ಗಳ ಜತೆ ಸಭೆ ನಡೆಸಿದ ನಂತರ ಈ ನಿರ್ಧಾರ ತಿಳಿಸಿದ್ದಾರೆ. ಇದೇ ವೇಳೆ ದುರ್ಘಟನೆಗೆ ಕಾರಣರಾದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ
ಅಧಿಕಾರಿಗಳಿಗೆ ಸೂಚಿಸಿದರು.

ಒಂದೇ ಕೌಂಟರಲ್ಲಿ ಟಿಕೆಟ್ ಪಡೆದು ರಾಫ್ಟಿಂಗ್
ನಡೆಸುವ ಹಾಗೆ ಮಾಡಲಾಗುವುದು. ಸಿಂಗಲ್ ವಿಂಡೋ ವ್ಯವಸ್ಥೆಯಲ್ಲಿ ರಾಪ್ಟಿಂಗ್ ನಡೆಸಲು ಕ್ರಮ ಕೈಗೊಳ್ಳುವ ಬಗ್ಗೆ ಚಿಂತನೆ ಮಾಡಲಾಗುತ್ತಿದೆ. ಹಾಗಾಗಿ ಅಲ್ಲಿಯವರೆಗೆ ಗಣೇಶ್‌ ಗುಡಿಯಲ್ಲಿ ಯಾವುದೇ
ಖಾಸಗಿ ರಾಪ್ಟಿಂಗ್ ನಡೆಸುವ ಹಾಗಿಲ್ಲ ಎಂದು ಎಚ್ಚರಿಸಿದರು.

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Exit mobile version