ರಾಜ್ಯಮಟ್ಟದ ಶಿಕ್ಷಕರ ಬೃಹತ್ ಉದ್ಯೋಗ ಮೇಳ

ಕಾರವರ: ಉತ್ತರಕನ್ನಡ ಜಿಲ್ಲೆಯ ಪ್ರತಿಷ್ಠಿತ ಅಂಕೋಲಾದ ಕೆ.ಎಲ್.ಇ ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯದಲ್ಲಿ ಮೂರನೇ ವರ್ಷದ ರಾಜ್ಯಮಟ್ಟದ ಶಿಕ್ಷಕರ ಬೃಹತ್ ಉದ್ಯೋಗ ಮೇಳವನ್ನು ಇದೇ ಏಪ್ರಿಲ್ 22ರ ಶುಕ್ರವಾರ ಬೆಳಿಗ್ಗೆ 9 ಗಂಟೆಗೆ ಆಯೋಜಿಸಲಾಗಿದೆ. ಶಿಕ್ಷಕ ಪದವೀಧರರಿಗೆ ಇದು ಸುವರ್ಣಾವಕಾಶವಾಗಿದ್ದು, ಈ ಬೃಹತ್ ಉದ್ಯೋಗ ಮೇಳದಲ್ಲಿ ರಾಜ್ಯಾದ್ಯಂತ, ಸ್ಥಳೀಯ ಹೊರಗಿನ 50 ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳು ಭಾಗವಹಿಸಲಿವೆ.

ಶಿಕ್ಷಕರ ಬೃಹತ್ ಉದ್ಯೋಗ ಮೇಳವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ಉದ್ಘಾಟಿಸುವರು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಸಚಿವರಾದ ಬಿ.ಸಿ.ನಾಗೇಶ, ಶಾಸಕರಾದ ರೂಪಾಲಿ ಎಸ್ ನಾಯ್ಕ, ಪಶ್ಚಿಮ ಪದವೀಧರ ಮತಕ್ಷೇತ್ರದ ವಿಧಾನ ಪರಿಷತ ಸದಸ್ಯರಾದ ಎಸ್.ವಿ. ಸಂಕನೂರ, ವಿಧಾನ ಪರಿಷತ್ ಸದಸ್ಯರಾದ ಗಣಪತಿ ಉಳ್ವೇಕರ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಕಳೆದ ವರ್ಷ ನಡೆದ ಉದ್ಯೋಗ ಮೇಳದಲ್ಲಿ 49 ಶೈಕ್ಷಣಿಕ ಸಂಸ್ಥೆಗಳು ಹಾಗೂ 401 ಅಭ್ಯರ್ಥಿಗಳು ಭಾಗವಹಿಸಿದ್ದು, ಅದರಲ್ಲಿ ಅನೇಕ ಅಭ್ಯರ್ಥಿಗಳಿಗೆ ಉದ್ಯೋಗ ಅವಕಾಶ ದೊರೆತಿದ್ದು, ಈ ವರ್ಷ ಸಹ ಸುಮಾರು 500ಕ್ಕೂ ಅಧಿಕ ಉದ್ಯೋಗ ಅವಕಾಶಗಳಿದ್ದು, ಅದನ್ನು ಸದುಪಯೋಗಪಡಿಸುವ ಉದ್ದೇಶ ಹೊಂದಲಾಗಿದೆ ಆಸಕ್ತರು ಇದರ ಸದುಪಯೋಗ ಪಡೆದುಕೊಳ್ಳಲು ಹೆಚ್ಚಿನ ಮಾಹಿತಿಗಾಗಿ ಈ ಸಂಪರ್ಕಿಸಿ.

ವಿಸ್ಮಯ ನ್ಯೂಸ್, ಕಾರವಾರ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Exit mobile version