ಕೆಳಗಡೆ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಬಾಲಕ ಸಾವು: ಸಹೋದರ ಗಂಭೀರ

ಮುoಡಗೋಡ: ಕೆಳಗಡೆ ಬಿದ್ದಿದ್ದ ವಿದ್ಯುತ್ ತಂತಿ ಹಿಡಿದ ಪರಿಣಾಮ 13 ವರ್ಷದ ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಅಗಡಿಯಲ್ಲಿ ನಡೆದಿದೆ. ಬೇಲಿಯ ಮೇಲೆ ವಿದ್ಯುತ್ ಲೈನ್ ಹರಿದು ಬಿದ್ದಿದ್ದು, ಇದನ್ನು ಮುಟ್ಟಿದ ಪರಿಣಾಮ ಸಾವನ್ನಪ್ಪಿದ್ದಾನೆ. ವಿದ್ಯುತ್ ಪ್ರವಹಿಸಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಮೃಪಟ್ಟಿದ್ದಾನೆ. ಮೃತಪಟ್ಟ ಬಾಲಕನನ್ನು ಅಷ್ಫಾಕ್ ಎಂದು ಗುರುತಿಸಲಾಗಿದೆ.

ಮತ್ತೊರ್ವ ಸಹೋದರ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ವಿದ್ಯುತ್ ತಂತಿಯನ್ನು ಮುಟ್ಟಿದ ಬಾಲಕನನ್ನು ಮುಟ್ಟಿದ ಪರಿಣಾಮ, ಸಹೋದರನಿಗೂ ಶಾಕ್ ತಗುಲಿದೆ. ಆದರೆ, ಈ ವೇಳೆ ಇದನ್ನು ಗಮನಿಸಿದ ಸಾರ್ವಜನಿಕರು ತಕ್ಷಣವೇ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ಪರಿಣಾಮ ಸಹೋದರ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್,

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Exit mobile version