ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಂದ ಗ್ರಾಮ ಪಂಚಾಯತ ಪ್ರದೇಶಗಳಿಗೆ ಭೇಟಿ: ಸರಕಾರದ ವಿವಿಧ ಯೋಜನೆಗಳ ಸಮರ್ಪಕ ಅನುಷ್ಠಾನದ ಕುರಿತು ಮಾರ್ಗದರ್ಶನ
ಭಟ್ಕಳ : ಉತ್ತರ ಕನ್ನಡ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಶ್ರೀಮತಿ ಪ್ರಿಯಾಂಗಾ ಎಂ. ರವರು ಭಟ್ಕಳದ ವಿವಿಧ ಗ್ರಾಮ ಪಂಚಾಯತ ಪ್ರದೇಶಗಳಿಗೆ ಭೇಟಿ ನೀಡಿ, ಸರಕಾರದ ವಿವಿಧ ಯೋಜನೆಗಳ ಸಮರ್ಪಕ ಅನುಷ್ಠಾನದ ಕುರಿತು ಮಾರ್ಗದರ್ಶನ ನೀಡಿದರು.
ಮೊದಲು ಬೆಳಕೆ ಗ್ರಾಮ ಪಂಚಾಯತಿಯ ಜಲ ಜೀವನ ಮಿಷನ್ (ಎಎಒ) ಕಾಮಗಾರಿ ಪ್ರದೇಶಗಳಾದ ಪಿನ್ನುಪಾಲ ಮತ್ತಿತರೆ ಪ್ರದೇಶಗಳಿಗೆ ಭೇಟಿ ನೀಡಿ, ಸದರ ಯೋಜನೆಯಡಿ ಪ್ರತಿ ಕುಟುಂಬಕ್ಕೆ ನೀರು ದೊರಕುವಂತೆ ಮಾಡುವಲ್ಲಿ ಅಭಿಯಂತರರು ಮತ್ತು ಗ್ರಾಮ ಪಂಚಾಯತ ಜನಪ್ರತಿನಿಧಿಗಳು ತೊಡಗಿಸಿಕೊಳ್ಳಬೇಕೆಂದು ಸೂಚಿಸಿದರು.
ನಂತರ ಯಲ್ವಡಿಕವೂರ ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷರು ಮತ್ತು ಸದಸ್ಯರೊಂದಿಗೆ ಅಧಿಕಾರಿಗಳ ಸಭೆ ನಡೆಸಿ, ಮಹಾತ್ಮಾಗಾಂಧಿ ನರೇಗಾ ಯೋಜನೆಯಡಿ ಈ ಪ್ರದೇಶಕ್ಕೆ ಹೊಂದಿಕೆಯಾಗುವ ಮತ್ತು ಋತುಮಾನ ಆಧಾರಿತ ಕಾಮಗಾರಿಗಳ ಬಗ್ಗೆ ಯೋಜನೆ ಸಿದ್ದಪಡಿಸಿ ಅನುಷ್ಠಾನಗೊಳಿಸುವುದು ಮತ್ತು ತಾಲೂಕಿನ ಪ್ರತಿ ಕುಟುಂಬಕ್ಕೂ ಉದ್ಯೋಗ ಚೀಟಿ ವಿತರಿಸಲು ಕ್ರಮ ಕೈಗೊಳ್ಳುವಂತೆ ಎಲ್ಲಾ ಗ್ರಾಮ ಪಂಚಾಯತಿಗಳಿಗೆ ನಿರ್ದೇಶನ ನೀಡಲು ಕಾರ್ಯನಿರ್ವಾಹಕ ಅಧಿಕಾರಿಯವರಿಗೆ ಸೂಚಿಸಿದರು. ಹಡೀನ ಜಲ ಜೀವನ ಮಿಷನ್ (ಎಎಒ) ಕಾಮಗಾರಿ ಮತ್ತು ಓಖಐಒ (ಸಂಜೀವಿನಿ) ಯೋಜನೆಯಡಿ ಶ್ರೀ ಮಹಾಸತಿ ಸಂಜೀವಿನಿ ಗ್ರಾಮ ಪಂಚಾಯತ ಮಟ್ಟದ ಒಕ್ಕೂಟದ ಕೃಷಿ ಯಂತ್ರೋಪಕರಣ ಬಾಡಿಗೆ ಮಳಿಗೆಗಳಿಗೆ ಭೇಟಿ ನೀಡಿ, ಒಕ್ಕೂಟದ ಸದಸ್ಯರಿಗೆ ಹಾಗೂ ಓಖಐಒ ಸಿಬ್ಬಂದಿಗಳಾದ ಶ್ರೀನಿವಾಸ, ಗೋಪಾಲ ಹಾಗೂ ವೆಂಕಟೇಶ ಇವರಿಗೆ ಸಲಹೆ ಸೂಚನೆಗಳನ್ನು ನೀಡಿದರು.
ಯಲ್ವಡಿಕವೂರ ಗ್ರಾಮ ಪಂಚಾಯತ ಅಧ್ಯಕ್ಷರಾದ ಲಕ್ಷ್ಮೀನಾರಾಯಣ ನಾಯ್ಕ, ಸದಸ್ಯರಾದ ನಾರಾಯಣ ನಾಯ್ಕ, ಕಾರ್ಯನಿರ್ವಾಹಕ ಅಧಿಕಾರಿಗಳಾದ ಪ್ರಭಾಕರ ಚಿಕ್ಕನ್ಮನೆ, ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಮಲ್ಲಪ್ಪ ಮಡಿವಾಳ, ನರೇಗಾ ತಾಂತ್ರಿಕ ಸಂಯೋಜಕರಾದ ವಿನಾಯಕ ನಾಯಕ ಮತ್ತಿತರರು ಹಾಜರಿದ್ದರು. ನಂತರ ಉದ್ಘಾಟನೆಗೆ ಸಿದ್ಧಗೊಂಡಿರುವ ಭಟ್ಕಳ ತಾಲೂಕಿನ ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ವಸತಿ ನಿಲಯ ಮತ್ತು ಅಲ್ಪಸಂಖ್ಯಾತರ ವಸತಿ ನಿಲಯ ಕಟ್ಟಡಗಳಿಗೆ ಭೇಟಿ ನೀಡಿ ಪರಿಶೀಲಿಸಿ, ಕೆಲವು ನೂನ್ಯತೆಗಳನ್ನು ಸರಿಪಡಿಸಲು ತಿಳಿಸಿ, ಶೀಘ್ರದಲ್ಲೇ ವಸತಿ ನಿಲಯ ಉದ್ಘಾಟಿಸಿ ವಿದ್ಯಾರ್ಥಿಗಳ ಉಪಯೋಗಕ್ಕೆ ನೀಡುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ ಸಂಬoಧಿಸಿದ ತಾಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ನಂತರ ಶಿರಾಲಿ ಗ್ರಾಮ ಪಂಚಾಯತ ಘನತ್ಯಾಜ್ಯ ವಿಲೇವಾರಿ ಘಟಕ ವೀಕ್ಷಣೆ ಮಾಡಿ, ಅಧ್ಯಕ್ಷರು, ಸದಸ್ಯರು ಹಾಗೂ ಪಂಚಾಯತ ಸಿಬ್ಬಂದಿಗಳೊoದಿಗೆ ಚರ್ಚಿಸಿ, ಸೂಕ್ತ ಸಲಹೆ ನೀಡಿದರು. ಹೆಬಳೆ ಗ್ರಾಮ ಪಂಚಾಯತಿಯ ನಿರ್ಮಾಣ ಹಂತರದಲ್ಲಿರುವ ಸೀ-ವಾಕ್ ಪ್ರದೇಶಕ್ಕೆ ಭೇಟಿ ನೀಡಿ, ನರೇಗಾ ಯೋಜನೆಯಡಿ ಸದರ ಪ್ರದೇಶದ ಸೌಂದರ್ಯ ಹೆಚ್ಚಿಸಲು ಅವಕಾಶವಿರುವ ಕಾಮಗಾರಿಗಳನ್ನು ಕೈಗತ್ತಿಕೊಳ್ಳುವಂತೆ ಗ್ರಾಮ ಪಂಚಾಯತ ಮತ್ತು ತಾಲೂಕಾ ಪಂಚಾಯತ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಹೆಬಳೆ ಗ್ರಾಮ ಪಂಚಾಯತ ಅಧ್ಯಕ್ಷರಾದ ಕುಪ್ಪು ಮಂಗಳ ಗೊಂಡ, ಸದಸ್ಯರಾದ ಸುಬ್ರಾಯ ದೇವಾಡಿಗ, ಪಾರ್ವತಿ ನಾಯ್ಕ, ಪ್ರಭಾರ ಸಹಾಯಕ ನಿರ್ದೇಶಕರಾದ ಮಹೇಶ ನಾಯ್ಕ ಮುಂತಾದವರು ಹಾಜರಿದ್ದರು. ಕೊನೆಯಲ್ಲಿ ಬೆಂಗ್ರೆ ಗ್ರಾಮ ಪಂಚಾಯತ ಘನತ್ಯಾಜ್ಯ ವಿಲೇವಾರಿ ಘಟಕ, ಕೊಳವೆ ಬಾವಿ ಮರುಪೂರಣ ಘಟಕಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.