Follow Us On

WhatsApp Group
Important
Trending

ಬ್ರಹ್ಮಾನಂದ ಶ್ರೀಗಳು ಕುಮಟಾ ಕ್ಷೇತ್ರದಿಂದ ಸ್ಪರ್ಧೆ ಬಯಸಿದರೆ ಕ್ಷೇತ್ರ ಬಿಡಲು ಸಿದ್ಧ: ಅಚ್ಚರಿ ಮೂಡಿಸಿದ ಶಾಸಕ ದಿನಕರ ಶೆಟ್ಟಿ ಹೇಳಿಕೆ

ಉಜಿರೆ ಬ್ರಹ್ಮಾನಂದ ಸರಸ್ವತಿ ಶ್ರೀಗಳ ಹೇಳಿಕೆಗೆ ಪ್ರತಿಕ್ರಿಯೆ

ಹೊನ್ನಾವರ: ಭಟ್ಕಳ ತಾಲೂಕಿನ ಧಾರ್ಮಿಕ ಕಾರ್ಯಕ್ರಮದಲ್ಲಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ರಾಜ್ಯದ 50 ಕ್ಷೇತ್ರದಲ್ಲಿ ಸಾಧುಸಂತರ ಸ್ಪರ್ಧೆ ಹಾಗೂ ಭಟ್ಕಳ ಕ್ಷೇತ್ರದಲ್ಲಿ ಶ್ರೀ ಬ್ರಹ್ಮಾನಂದ ಸ್ವಾಮೀಜಿಯವರ ಸ್ಪರ್ಧೆ ಬಗ್ಗೆ ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ಪ್ರತಿಕ್ರಿಯಿಸಿದ್ದಾರೆ.

ಹೊನ್ನಾವರ ತಾಲೂಕಿನ ಸಾಲಕೋಡ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಕಾಮಗಾರಿಗೆ ಚಾಲನೆನೀಡಿದ ಬಳಿಕ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು ಸ್ವಮೀಜಿಯವರ ಕುರಿತಾಗಿ ನಾನು ಏನನ್ನೂ ಹೇಳಲು ಸಾಧ್ಯವಿಲ್ಲ. ಅವರ ಬಗ್ಗೆ ಗೌರವ, ಅಭಿಮಾನವಿದೆ. ಒಂದೊಮ್ಮೆ ಕುಮಟಾ ಕ್ಷೇತ್ರದಿಂದ ಸ್ಪರ್ಧೆ ಮಾಡುದಾದರೆ ನಾನು ಹಿಂದೆ ಸರಿಯುತ್ತೇನೆ, ಕೇವಲ ಹಿಂದೆ ಸರಿಯುದಷ್ಟೆ ಅಲ್ಲದೇ ತನು, ಮನ, ಧನದಿಂದ ಸಹಕಾರ ನೀಡಲು ಸಿದ್ದನಿದ್ದೇನೆ ಎಂದರು.

ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ಚುನಾವಣೆಗೆ ಒಂದು ವರ್ಷ ಇರುವಾಗ ಕುಮಟಾ ಹೊನ್ನಾವರ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರುತ್ತಿದ್ದು, ಪ್ರಮುಖವಾಗಿ ಕಾಂಗ್ರೇಸ್ ಬಿಜೆಪಿಯಿಂದ ಹತ್ತಾರು ಆಂಕಾಕ್ಷಿಗಳು ಇರುವುದರಿಂದ ಈ ಬಾರಿಯೂ ಟಿಕೇಟ್ ಯಾರಿಗೆ ಸಿಗಲಿದೆ ಎಂದು ಕೂತೊಹಲ ಮೂಡಿಸಿದೆ. ಶ್ರೀಗಳು ಸ್ಪರ್ಧೆಯ ಹೇಳಿಕೆ ಬೆನ್ನಲ್ಲೆ ಶಾಸಕ ದಿನಕರ ಶೆಟ್ಟಿ ಅವರ ಹೇಳಿಕೆ ಕ್ಷೇತ್ರದಲ್ಲಿ ಹೊಸ ಸಂಚಲನ ಮೂಡಿಸಿದೆ. ಈ ಹೇಳಿಕೆ ಬಿಜೆಪಿ ಸೇರಿದಂತೆ ಬೇರೆ ಪಕ್ಷದವರು ಹುಬ್ಬೇರಿಸುವಂತೆ ಮಾಡಿದೆ.

ವಿಸ್ಮಯ ನ್ಯೂಸ್ ಶ್ರೀಧರ ನಾಯ್ಕ ಹೊನ್ನಾವರ,

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ

Back to top button