Follow Us On

WhatsApp Group
Important
Trending

ಅಪರೂಪದ ವೀರಗಲ್ಲು ಪತ್ತೆ: ಇತಿಹಾಸದ ಹೆಚ್ಚಿನ ಅಧ್ಯಯನಕ್ಕೆ ಅನುಕೂಲ

ಶಿರಸಿ: ತಾಲೂಕಿನ ನೆಗ್ಗು ಗ್ರಾಮ ಪಂಚಾಯಿತಿಯ ಹೊಸಳ್ಳಿಯಲ್ಲಿ 1401 ನೇ ಇಸ್ವಿಯ ಅಪರೂಪದ ವೀರಗಲ್ಲು ಪತ್ತೆಯಾಗಿದೆ. ಇತಿಹಾಸಕಾರ ಲಕ್ಷ್ಮೀಶ ಸೋಂದಾ ಅವರ ತಂಡ ಅಪ್ರಕಟಿತ ಈ ಶಾಸನದ ಮೇಲೆ ಬೆಳಕು ಚೆಲ್ಲಿದ್ದಾರೆ. ಇದರಿಂದಾಗಿ ನೆಗ್ಗು ಪಂಚಾಯಿತಿ ವ್ಯಾಪ್ತಿಯ ಇತಿಹಾಸದ ಬಗ್ಗೆ ಇದೇ ಮೊದಲ ಬಾರಿ ಹೆಚ್ಚಿನ ಮಾಹಿತಿ ಲಭ್ಯವಾದಂತಾಗಿದೆ.

ಇಲ್ಲಿಯ ಹೊಸಳ್ಳಿ ಗ್ರಾಮದಲ್ಲಿ ಈ ವೀರಗಲ್ಲು ಮಣ್ಣು ಅಡಿಯಲ್ಲಿ ಹೂತು ಹೋದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಇತಿಹಾಸಕಾರರಾದ ಲಕ್ಷ್ಮೀಶ ಸೋಂದಾರವರು ಈ ಕುರಿತು ಅಭ್ಯಸಿಸಿದಾಗ ಇದೊಂದು ವೀರಗಲ್ಲು ಶಾಸನವಾಗಿದ್ದು ಕ್ರಿ.ಶ 1401 ರ ಕಾಲಮಾನದ್ದಾಗಿದೆ, ಎಂದು ಊಹಿಸಿದ್ದಾರೆ.

ವಿಸ್ಮಯ ನ್ಯೂಸ್, ಶಿರಸಿ

Back to top button