Follow Us On

WhatsApp Group
Focus News
Trending

ಶಿವಮೊಗ್ಗದಲ್ಲಿ ಉತ್ತರಕನ್ನಡ ಜಿಲ್ಲಾ ಪ್ರಮುಖರ ಸಭೆ

ಕಾರವಾರ: ರಾಜ್ಯ ವಿಧಾನಸಭಾ ಚುನಾವಣೆಯನ್ನು ಬರುವ ಡಿಸೆಂಬರ್‌ನ ಒಳಗೆ ನಡೆಸುವ ಮುನ್ಸೂಚನೆಯನ್ನು ಬಿಜೆಪಿಯ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಅವರು ಪಕ್ಷದ ರಾಜ್ಯಘಟಕಕ್ಕೆ ಹಾಗೂ ಬೊಮ್ಮಾಯಿ ಸರ್ಕಾರಕ್ಕೆ ನೀಡುತ್ತಿದ್ದಂತೆ ಪಕ್ಷದಲ್ಲಿ ಚಟುವಟಿಕೆ ಆರಂಭವಾಗಿದೆ. ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಸಿದ್ಧತೆಗಾಗಿ ಜಿಲ್ಲಾವಾರು ಸಭೆಗಳನ್ನು ನಡೆಸಲಾಗುತ್ತಿದ್ದು, ಇದೀಗ ಶಿವಮೊಗ್ಗದಲ್ಲಿ ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳ ಹಾಗೂ ಬಿಜೆಪಿ ಪದಾಧಿಕಾರಿಗಳ ಸಭೆಯನ್ನು ಕರೆಯಲಾಗಿತ್ತು.

ಈ ಸಭೆಯ ಅಧ್ಯಕ್ಷತೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಹಿಸಿಕೊಂಡಿದ್ದರು. ಉಪಸ್ಥಿತರಲ್ಲಿ ಪಕ್ಷದ ಮಾಜಿ ಅಧ್ಯಕ್ಷ ಸದಾನಂದ ಗೌಡ, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ ಪಕ್ಷದ ರಾಜ್ಯ ಘಟಕದ ಉಪಾಧ್ಯಕ್ಷರುಗಳಾದ ವಿಜಯೇಂದ್ರ ಹಾಗೂ ನಿರ್ಮಲ್ ಕುಮಾರ್ ಸುರಾನಾ ಅವರು ಹಾಜರಿದ್ದರು.

ವಿಸ್ಮಯ ನ್ಯೂಸ್, ಕಾರವಾರ

Back to top button