Important
Trending

ಕಬ್ಬಿನಗದ್ದೆ ಕೆಲಸಕ್ಕೆ ಕಾರ್ಮಿಕರ ಕರೆದೊಯ್ಯುತ್ತಿದ್ದ ವೇಳೆ ವಾಹನ ಪಲ್ಟಿ: ಓರ್ವ ಸಾವು: 15 ಮಂದಿಗೆ ಗಾಯ

ಆರು ಕೆಲಸಗಾರರ ಸ್ಥಿತಿ ಗಂಭೀರ

ಕಾರವಾರ: ಟಾಟಾ ಏಸ್ ವಾಹನ ಪಲ್ಟಿಯಾಗಿ ಓರ್ವ ಸಾವನ್ನಪ್ಪಿ, 15 ಮಂದಿ ಗಾಯಗೊಂಡ ಘಟನೆ ಮುಂಡಗೋಡ ತಾಲೂಕಿನ ಬಡ್ಡಿಗೇರಿ ಬಳಿ ನಡೆದಿದೆ. ಕಬ್ಬಿನಗದ್ದೆ ಕೆಲಸಕ್ಕೆ ಕಾರ್ಮಿಕರ ಕರೆದೊಯ್ಯುತ್ತಿದ್ದ ವೇಳೆ ವಾಹನ ಪಲ್ಟಿಯಾಗಿದ್ದು, ದುರ್ಘಟನೆ ಸಂಭವಿಸಿದೆ. ಮೃತಪಟ್ಟ ವ್ಯಕ್ತಿಯನ್ನು 24 ವರ್ಷದ ಮಾಬು ಗಾಯಡೆ ಎಂದು ಗುರುತಿಸಲಾಗಿದೆ.

15 ಮಂದಿ ಗಾಯಾಳುಗಳಲ್ಲಿ ಆರು ಜನರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಗಾಯಾಳುಗಳನ್ನು ತಾಲೂಕಾಸ್ಪತ್ರೆಗೆ ಸೇರಿಸಿ, ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಕಿಮ್ಸ್ ದಾಖಲಿಸಲಾಗಿದೆ. ಮುಂಡಗೋಡ ಪೊಲೀಸರು ಸ್ಥಳಕ್ಕೆ ಆಗಮಿಸಿ, ತನಿಖೆ ಆರಂಭಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನು ತಿಳಿದುಬರಬೇಕಿದೆ.

ವಿಸ್ಮಯ ನ್ಯೂಸ್, ಕಾರವಾರ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button