ಸಿದ್ದಾಪುರ: ಕಾಳಿಂಗ ಸರ್ಪವೊಂದು ಹೆಬ್ಬಾವಿನ ಮರಿಯನ್ನು ನುಂಗಲು ಪ್ರಯತ್ನಿಸಿದ ಘಟನೆ ತಾಲೂಕಿನ ಗ್ರಾಮೀಣ ಭಾಗವಾದ ಹೆಗ್ಗರಣಿ ಸಮೀಪದ ಹಳೇಹಳ್ಳದಲ್ಲಿ ನಡೆದಿದೆ.
ಹೌದು, ಇಲ್ಲಿನ ಕೊಟ್ಟಿಗೆ ಸಮೀಪದ ಗೊಬ್ಬರ ಗುಂಡಿ ಬಳಿಕ ಕಾಳಿಂಗ ಸರ್ಪ ಹೆಬ್ಬಾವಿನ ಮರಿಯನ್ನು ನುಂಗಲು ಪ್ರಯತ್ನಿಸಿದೆ. ಕಾಳಿಂಗ ಸರ್ಪವು ಹೆಬ್ಬಾವನ್ನು ನುಂಗಲು ಪ್ರಯತ್ನಿಸಿ, ಸಾಧ್ಯವಾಗದೇ ಅರ್ಧ ನುಂಗಿದ್ದ ಹಾವನ್ನು ಹೊರ ಹಾಕುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮನೆಯವರು ಬೃಹತ್ ಕಾಳಿಂಗ ಸರ್ಪವನ್ನು ನೋಡಿದ್ದು, ಆತಂಕಗೊoಡಿದ್ದರು. ವಿಷಯ ತಿಳಿದ ಕೂಡಲೇ ಸುತ್ತ ಮುತ್ತಲ ಜನರು ಕಾಳಿಂಗನನ್ನು ಸ್ಥಳಕ್ಕೆ ಆಗಮಿಸಿದರು. ಅರಣ್ಯ ಇಲಾಖೆಯ ಅಧಿಕಾರಿಗಳೂ ಸಹ ಘಟನಾ ಸ್ಥಳದಲ್ಲಿ ಹಾಜರಿದ್ದು, ಉರಗ ತಜ್ಞ ಕುಮಟಾದ ಪವನ್ ನಾಯ್ಕ, ಹಾವನ್ನು ಹಿಡಿದು ರಕ್ಷಿಸಿದ್ದಾರೆ.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್
ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.