ಮರಕ್ಕೆ ಗುದ್ದಿದ ಬುಲೆರೋ: ಬಾಡಿಗೆ ವಾಹನದಲ್ಲಿ ಬೆಂಗಳೂರಿಗೆ ಹೊರಟಿದ್ದ ಮೂವರ ದುರ್ಮರಣ

ಹೊನ್ನಾವರ: ಬಾಡಿಗೆ ವಾಹನದಲ್ಲಿ ಬೆಂಗಳೂರಿಗೆ ಹೊರಟಿದ್ದ ಕರ್ಕಿ ತೊಪ್ಪಲಕೇರಿಯ ಮೂವರು ಯುವಕರು ಅಪಘಾತದಲ್ಲಿ ಮೃತಪಟ್ಟ ಘಟನೆ ನಡೆದಿದೆ. ಶಿವಮೊಗ್ಗ ತರೀಕೆರೆ, ಹೊಸದುರ್ಗ ಮಾರ್ಗವಾಗಿ ತುಮಕೂರಿಗೆ ಹೋಗುತ್ತಿದ್ದ ವೇಳೆ ಚಿತ್ರದುರ್ಗದ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಅಜ್ಜಂಪುರ ಬೋಕಿಕೆರೆ ಕ್ರಾಸ್ ಬಳಿ ಅಪಘಾತ ಸಂಭವಿಸಿದ್ದು, ಬೊಲೆರೊ ವಾಹನವು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ.

ಈ ವೇಳೆ ಮೂವರು ಮೃತಪಟ್ಟಿದ್ದು, ಒಬ್ಬರು ಗಾಯಗೊಂಡಿದ್ದಾರೆ. ಹೊನ್ನಾವರ ತಾಲ್ಲೂಕಿನ ಕರ್ಕಿಯ ಶ್ರೀಧರ ನಾಯ್ಕ(29), ವಿನಾಯಕ ನಾಯ್ಕ (30) ಹಾಗೂ ಜೀವನ್ ನಾಯ್ಕ (21) ಮೃತರು ಎಂದು ತಿಳಿದು ಬಂದಿದೆ. ಇವರು ಕರ್ಕಿಯಿಂದ ಬೊಲೆರೋ ಸೀಟರ್ ವಾಹನದಲ್ಲಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದರು. ಆದರೆ, ಇವರಿದ್ದ ವಾಹನ ನಿಯಂತ್ರಣ ತಪ್ಪಿ ಮರಕ್ಕೆ ಅಪ್ಪಳಿದ ಪರಿಣಾಮ ನಾಲ್ವರ ಪೈಕಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವಿಸ್ಮಯ ನ್ಯೂಸ್, ಹೊನ್ನಾವರ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Exit mobile version