ರಸ್ತೆ ದಾಟುತ್ತಿದ್ದ ವೇಳೆ ಜಿಂಕೆಗೆ ಕಾರು ಡಿಕ್ಕಿ: ಜಿಂಕೆ ಸ್ಥಳದಲ್ಲೇ ಸಾವು

ಸಿದ್ದಾಪುರ: ರಸ್ತೆ ದಾಟುತ್ತಿದ್ದ ಜಿಂಕೆಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮವಾಗಿ ಜಿಂಕೆ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಮಂಡ್ಲಿ ಕೊಪ್ಪ ಸಮೀಪದ ಚೌಡಿಆಣೆ ಬಳಿ ನಡೆದಿದೆ. ಸಿರ್ಸಿ ಕಡೆಯಿಂದ ಸಿದ್ದಾಪುರ ಕಡೆಗೆ ಕಾರು ಬರುತ್ತಿದ್ದ ವೇಳೆ ಬೆಳಗಿನ ಜಾವ ಘಟನೆ ಸಂಭವಿಸಿದೆ ಎನ್ನಲಾಗಿದೆ.

ಘಟನೆ ನಡೆದ ವಿಷಯ ತಿಳಿದ ಸ್ಥಳೀಯರು ಸ್ಥಳಕ್ಕೆ ಭೇಟಿ ನೀಡಿ ಜಿಂಕೆ ರಕ್ಷಣೆ ಕಾರ್ಯಕ್ಕೆ ಮುಂದಾಗಿದ್ದು, ಆದರೆ ಅಪಘಾತವಾದ ಕೂಡಲೆ ಜಿಂಕೆ ಮೃತಪಟ್ಟಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ಅರಣ್ಯ ಇಲಾಖೆ ಅಧಿಕಾರಿಗಳಿಂದ ತಿಳಿದುಬರಬೇಕಿದೆ.

ವಿಸ್ಮಯ ನ್ಯೂಸ್, ದಿವಾರಕ ಸಂಪಖoಡ, ಸಿದ್ದಾಪುರ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Exit mobile version