ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ: 28 ಜನರಿಗೆ ಗಾಯ

ಹೊನ್ನಾವರ: ತಾಲೂಕಿನ ಗೇರುಸೊಪ್ಪಾದ ಸೂಳೆಮಕ್ಕಿ ಕ್ರಾಸ್ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿದೆ. ಬಸ್ ನಲ್ಲಿ ಇದ್ದ 28 ಜನರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಬಗ್ಗೆ ವರದಿಯಾಗಿದೆ. ಬೆಂಗಳೂರು ಮೂಲದ ಪ್ರವಾಸಿಗರು,ಶಿವಮೊಗ್ಗ ಪ್ರವಾಸ ಮುಗಿಸಿ ಉತ್ತರಕನ್ನಡ ಜಿಲ್ಲೆಯ ಗೋಕರ್ಣ, ಮುರ್ಡೇಶ್ವರ ಪ್ರವಾಸಕ್ಕೆ ಬರುತ್ತಿರುವ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ.

ವಾಹನ ಚಾಲಕ ಲಕ್ಕುಂದ ರಾಜಕುಮಾರ ಎನ್ನುವ ಚಾಲಕ ಅತಿವೇಗ ಹಾಗೂ ನಿರ್ಲಕ್ಷ್ಯ ಚಾಲನೆಯೆ ಅಪಘಾತಕ್ಕೆ ಕಾರಣವಾಗಿದೆ ಎನ್ನಲಾಗಿದೆ. ಬಸ್ ಅಪಘಾತದಿಂದ ಬಸನಲ್ಲಿದ 28 ಪ್ರವಾಸಿಗರಿಗೆ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಾಪಯದಿಂದ ಪಾರಾಗಿದ್ದಾರೆ. ಬಸ್ ಚಾಲಕನ ವಿರುದ್ದ ಹೊನ್ನಾವರ ಪೊಲೀಸ್ ಠಾಣಿಯಲ್ಲಿ ಪ್ರಕರಣ ದಾಖಲಾಗಿದೆ, ಸ್ಥಳದಲ್ಲಿ ಟ್ರಾಪಿಕ್ ಸಮಸ್ಯೆ ಉದ್ಭವಿಸದಂತೆ ಸ್ಥಳಿಯರು ಮತ್ತು ಸಾರ್ವಜನಿಕರ ಸಹಾಯದಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ, ಹೊನ್ನಾವರ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Exit mobile version