ಅಪರಿಚಿತ ವ್ಯಕ್ತಿಯ ಶವ ಪತ್ತೆ: ಗುರುತು ಸಿಕ್ಕಲ್ಲಿ ಮಾಹಿತಿ ನೀಡುವಂತೆ ಮನವಿ

ಕುಮಟಾ ಪಟ್ಟಣದ ಮೀನು ಮಾರುಕಟ್ಟೆಯ ಬಸ್ ನಿಲ್ದಾಣದ ಹಿಂಭಾಗದಲ್ಲಿ ಅನಾಥ ವ್ಯಕ್ತಿಯೋರ್ವ ಶವ ಪತ್ತೆಯಾಗಿದೆ. ಈತ ಕೆಲವು ದಿನಗಳಿಂದ ಕುಮಟಾ ಪಟ್ಟಣದಲ್ಲಿ ಓಡಾಡುತ್ತಿದ್ದ ಎನ್ನಲಾಗಿದ್ದು, ಇದೀಗ ಮೀನು ಮಾರುಕಟ್ಟೆಯ ಬಸ್ ನಿಲ್ದಾಣದ ಹಿಂಭಾಗದಲ್ಲಿ ಮೃತ ದೇಹ ಪತ್ತೆಯಾಗಿದೆ. ಕುಮಟಾ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಶವವನ್ನು ಕುಮಟಾ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಿದ್ದಾರೆ. ಈತನಿಗೆ ಗುರುತು ಪತ್ತೆಯಾದಲ್ಲಿ ಠಾಣೆಗೆ ಮಾಹಿತಿ ನೀಡುವಂತೆ ಕೋರಲಾಗಿದೆ.

ವಿಸ್ಮಯ ನ್ಯೂಸ್, ಕುಮಟಾ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Exit mobile version