ಬ್ಯೂಟಿ ಪಾರ್ಲರ್ ನಲ್ಲಿ ಸಾಧನೆಗಾಗಿ ಮಮತಾ ನಾಯ್ಕ ಅವರಿಗೆ ಅಂತರಾಷ್ಟ್ರೀಯ ಗೋಲ್ಡನ್ ಅಚೀವ್‌ಮೆಂಟ್ ಪ್ರಶಸ್ತಿ

ಯಲ್ಲಾಪುರ: ಬ್ಯೂಟಿ ಪಾರ್ಲರ್ ನಲ್ಲಿ ಸಾಧನೆಗಾಗಿ ಮಮತಾ (ನಿಶಾ) ನಾಯ್ಕ ಅವರಿಗೆ ಅಂತರಾಷ್ಟ್ರೀಯ ಗೋಲ್ಡನ್ ಅಚೀವ್‌ಮೆಂಟ್ ಪ್ರಶಸ್ತಿ ಸಿಕ್ಕಿದೆ. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅಂತರಾಷ್ಟ್ರೀಯ ಫ್ಯಾಷನ್ ಡೈರೆಕ್ಟರ್ ಶ್, ಸಂಗೀತ ನಿರ್ದೇಶಕ ವಿ. ಮನೋಹರ, ಖ್ಯಾತ ಸರ್ಜನ್ ಡಾ.ಅಂಜಿನಪ್ಪ ಹಾಗೂ ಅಂತರಾಷ್ಟ್ರೀಯ ಮಾಡೆಲ್ ಸಂತೋಷ ರೆಡ್ಡಿ ಉಪಸ್ಥಿತಿಯಲ್ಲಿ ಪ್ರಶಸ್ತಿಯನ್ನು ಮಮತಾ ನಾಯ್ಕ ಪ್ರಶಸ್ತಿ ಸ್ವೀಕರಿಸಿದರು.

ಪ್ರತಿ ವರ್ಷ ಫ್ಯಾಷನ್ ಕ್ಷೇತ್ರದಲ್ಲಿ ಯಶ ಇಂಟರನ್ಯಾಷನಲ್ ಫ್ಯಾಷನ್‌ನವರು ಕೊಡಮಾಡುವ ಅನೇಕ ಪ್ರಶಸ್ತಿ ಕೂಡಾ ಒಂದು. ಕಳೆದ 16 ವರ್ಷಗಳಿಂದ ತನ್ನ ಮೇಕಪ್ ಆರ್ಟ್‌ನಲ್ಲೂ ಸಾಧನೆ ಮಾಡಿದ್ದಾರೆ ಮಮತಾ ನಾಯ್ಕ.

ವಿಸ್ಮಯ ನ್ಯೂಸ್ ಯಲ್ಲಾಪುರ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Exit mobile version