ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಅಕ್ರಮವಾಗಿ ಗೋವಾ ಮದ್ಯ ಸಾಗಾಟ: ದುಬಾರಿ ಬೆಲೆಯ ವಿವಿಧ ಬ್ರಾಂಡ್ ನ ಗೋವಾ ಮದ್ಯ ವಶಕ್ಕೆ

ಕಾರವಾರ: ಸಾಗರ-ಪಣಜಿ ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಅಕ್ರಮವಾಗಿ ಗೋವಾ ಮದ್ಯ ಸಾಗಿಸುತಿದ್ದ ಇಬ್ಬರನ್ನು ವಶಕ್ಕೆ ಪಡೆದು 1.27 ಲಕ್ಷ ಮೌಲ್ಯದ ದುಬಾರಿ ಬೆಲೆಯ ವಿವಿಧ ಬ್ರಾಂಡ್ ನ ಗೋವಾ ಮದ್ಯವನ್ನು ಅಬಕಾರಿ ಇಲಾಖೆ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡ ಘಟನೆ ಕಾರವಾರ ತಾಲೂಕಿನ ಮಾಜಾಳಿಯ ಚೆಕ್ ಪೋಸ್ಟ್ ನಲ್ಲಿ ನಡೆದಿದೆ.

ಶಿವಮೊಗ್ಗ ಮೂಲದ ನಾಗರಾಜ (35), ಸಾಗರ್ (25) ಬಂಧಿತರಾಗಿದ್ದಾರೆ. ಗೋವಾದಿಂದ ಶಿವಮೊಗ್ಗ ಕ್ಕೆ ಬ್ಯಾಗ್ ನಲ್ಲಿ ವಿವಿಧ ಬ್ರಾಂಡ್ ನ ಮದ್ಯವನ್ನು ತುಂಬಿಕೊಂಡು ಬಸ್ ನಲ್ಲಿ ತೆರಳುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಅಬಕಾರಿ ಇಲಾಖೆ ತಂಡ ಮಾಜಾಳಿ ಚೆಕ್ ಪೋಸ್ಟ್ ನಲ್ಲಿ ಬಸ್ ತಡೆದು ತಪಾಸಣೆ ನಡೆಸಿದೆ.

ಈ ವೇಳೆ ಬ್ಯಾಗ್ ನಲ್ಲಿ ಮದ್ಯ ಇರುವುದು ಪತ್ತೆಯಾಗಿದ್ದು, ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ಕಾರವಾರ ಅಬಕಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್ ಕಾರವಾರ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Exit mobile version