ತೋಟದಲ್ಲಿರುವ ಬಾವಿಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಸಾವಿಗೆ ಶರಣು

ಭಟ್ಕಳ: ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಯುವತಿಯೋರ್ವಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿ ಕೊಂಡಿರುವ ಘಟನೆ ತಾಲೂಕಿನ ಶೇಡಗೇರಿ ಗೋಳಿ ಕುಂಬ್ರಿಯಲ್ಲಿ ನಡೆದಿದೆ . ಆತ್ಮಹತ್ಯೆ ಮಾಡಿಕೊಂಡ  ಯುವತಿ ದೀಪಿಕಾ ಗೋವಿಂದ ನಾಯ್ಕ (17) ಮುರುಡೇಶ್ವರ ಪಿಯು ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡಿಕೊಂಡಿದ್ದಳು.

ಈಕೆ ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಮನೆಯಲ್ಲಿ ಯಾರು ಇಲ್ಲದ ವೇಳೆ ತಮ್ಮ ತೋಟದ ಮೇಲ್ಭಾಗದಲ್ಲಿರುವ ಬಾವಿಯಲ್ಲಿ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಂತರ ಯುವತಿ ಮೃತ ದೇಹವನ್ನು ಭಟ್ಕಳ ಸರ್ಕಾರಿ ಆಸ್ಪತ್ರೆಗೆ ತಂದು ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಕ್ಕೆ ಹಸ್ತಾಂತರಿಸಿದ್ದಾರೆ.  ಈ ಕುರಿತು ಮುರುಡೇಶ್ವರ ಪೊಲೀಸ ಠಾಣೆಯಲ್ಲಿ ಮೃತ ಯುವತಿಯ ತಂದೆ ಪ್ರಕರಣ ದಾಖಲಿದ್ದಾರೆ.

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Exit mobile version