Important
Trending

ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ: ಮೂವರು ವಿದ್ಯಾರ್ಥಿಗಳ ಬಂಧನ: ತಲೆಮರೆಸಿಕೊಂಡ ಓರ್ವನಿಗಾಗಿ ಹುಡುಕಾಟ

ಕುಮಟಾ: ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣಕ್ಕೆ ಸಂಬoಧಿಸಿದoತೆ ಮೂವರು ಯುವಕರನ್ನು ಕುಮಟಾ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಆರೋಪಿಗಳನ್ನು ಪೊಲೀಸರು ಜಿಲ್ಲಾ ನ್ಯಾಯಾಲಕ್ಕೆ ಹಾಜರುಪಡಿಸಿದ್ದಾರೆ. ಪಟ್ಟಣದ ಪಿಯು ಕಾಲೇಜ್ ವೊಂದರ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ವೆಸಗಿದ ನಾಲ್ವರು ಯುವಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಾದ ಹಿನ್ನಲೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

ಕುಮಟಾ ತಾಲೂಕಿನ ಗಣೇಶ ಗೌಡ, ಮಂಜುನಾಥ ಗೌಡ ಹಾಗೂ ಹೊನ್ನಾವರದ ರಾಮಚಂದ್ರ ನಾಯ್ಕ ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ. ಇನ್ನೊಬ್ಬ ಆರೋಪಿ ಪರಾರಿಯಾಗಿದ್ದು, ಪೊಲೀಸರು ಈತನ ಪತ್ತೆಗೆ ಶೋಧ ಆರಂಭಿಸಿದ್ದಾರೆ. ಈ ನಾಲ್ವರು ಸೇರಿ ಅಪ್ರಾಪ್ತ ಯುವತಿ ಮೇಲೆ ಪದೇ ಪದೇ ಲೈಂಗಿಕ ದೌರ್ಜನ್ಯ ಎಸಗಿದ್ದು, ಪರಿಣಾಮ ಯುವತಿ ಗರ್ಭಿಣಿಯಾಗಿದ್ದಳು. ಬಳಿಕ ಯುವತಿ ಕುಮಟಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಈ ಹಿನ್ನಲೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಸಂತ್ರಸ್ತೆ ಯುವತಿಯನ್ನು ಕಾರವಾರದ ಸ್ವೀಕಾರ ಕೇಂದ್ರಕ್ಕೆ ಸಾಗಿಸಲಾಗಿದೆ.

ವಿಸ್ಮಯ ನ್ಯೂಸ್, ಕುಮಟಾ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button