ಉತ್ತರಕನ್ನಡ ಜಿಲ್ಲೆಯ ಹಲವೆಡೆ ಭಾರೀ ಮಳೆ: ತಂಪಾಯ್ತು ಇಳೆ

ಕುಮಟಾ, ಹೊನ್ನಾವರ, ಸಿದ್ದಾಪುರದಲ್ಲಿ ಮುಂಜಾನೆಯಿoದಲೇ ವರುಣನ ಅಬ್ಬರ: ಮತ್ತೆರಡು ದಿನ ಮಳೆಯ ಮುನ್ಸೂಚನೆ

ಅಸನಿ ಚಂಡಮಾರುತದ ಎಫೆಕ್ಟ್ನಿಂದಾಗಿ ರಾಜ್ಯದೆಲ್ಲೆಡೆ ವ್ಯಾಪಕ ಮಳೆ ಪ್ರಾರಂಭವಾಗಿದ್ದು, ಅಂತೆಯೇ ಉತ್ತರ ಕನ್ನಡ ಜಿಲ್ಲೆಯ ಹಲವು ಭಾಗಗಳಲ್ಲಿ ಇಂದು ಭಾರಿ ಮಳೆ ಸುರಿದಿದೆ. ಕಳೆದ ಕೆಲ ದಿನದಿಂದ ಜಿಲ್ಲೆಯು ಮೊಡ ಕವಿದ ವಾತಾವರಣದಿಂದ ಕೂಡಿದ್ದು, ಇಂದು ಮುಂಜಾನೆಯಿoದ ಜಿಲ್ಲೆಯ ವಿವಿಧ ತಾಲೂಕಿನಲ್ಲಿ ಭಾರಿ ಮಳೆ ಸುರಿದಿದೆ.

ಅಸನಿ ಚಂಡಮಾರುತದ ತೀವ್ರತೆಯಿಂದಾಗಿ ಮಳೆಯಾಗುವ ವೇಳೆ ಗಾಳಿ ಹೆಚ್ಚಾಗಲಿದ್ದು, ಗುಡುಗು ಹಾಗೂ ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಸೈಕ್ಲೋನ್‌ನಿಂದಲೇ ರಾಜ್ಯದೆಲ್ಲೆಡೆ ಮೋಡ ಕವಿದ ವಾತಾವರಣವಿದ್ದು, ಕರಾವಳಿಯಲ್ಲಿ ಇಂದಿನಿoದ 2 ದಿನಗಳ ಕಾಲ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ
ತಿಳಿಸಿದೆ.

ವಿಸ್ಮಯ ನ್ಯೂಸ್, ಕುಮಟಾ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Exit mobile version