Follow Us On

WhatsApp Group
Important
Trending

ರಸ್ತೆಯ ಪಕ್ಕದಲ್ಲೇ ಹೋಗುತ್ತಿದ್ದ ವ್ಯಕ್ತಿಗೆ ಗುದ್ದಿದ ಕಾರು: ಪಾದಚಾರಿ ಸ್ಥಳದಲ್ಲೇ ಸಾವು

ಹೊನ್ನಾವರ: ಕಾರು ಗುದ್ದಿದ ಪರಿಣಾಮ ಪಾದಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಹಳದೀಪುರ ಅಗ್ರಹಾರದಲ್ಲಿ ನಡೆದಿದೆ. ಅಗ್ರಹಾರದ ನಿವಾಸಿ ಮಹೇಶ್ ರಾಮದಾಸ್ ಹಳದಿಪುರ (67) ಮೃತಪಟ್ಟವರು ಎಂದು ತಿಳಿದುಬಂದಿದೆ. ಹೊನ್ನಾವರ ಕಡೆಯಿಂದ ಕುಮಟಾ ಕಡೆ ಹೋಗುತ್ತಿದ್ದ ಕಾರು ಚಾಲಕನ ಅಜಾಗರೂಕತೆ ಚಾಲನೆಯಿಂದ ಈ ದುರ್ಘಟನೆ ಸಂಭವಿಸಿದೆ.

ಹೌದು, ರಸ್ತೆಯ ಪಕ್ಕದಲ್ಲೇ ಹೋಗುತ್ತಿದ್ದ ಪಾದಚಾರಿಗೆ ಕಾರು ಗುದ್ದಿದ ಪರಿಣಾಮ ಸ್ಥಳದಲ್ಲೇ ವ್ಯಕ್ತಿ ಮೃತಪಟ್ಟಿದ್ದಾರೆ. ಈ ಬಗ್ಗೆ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಹೊನ್ನಾವರ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button